ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 147

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನಿಗೆ ಸ್ತೋತ್ರ! ನಮ್ಮ ದೇವರನ್ನು ಸ್ತುತಿಸುವುದು ಒಳ್ಳೆಯದೂ, ಸಂತೋಷಕರವೂ ಆಗಿದೆ, ಆತನನ್ನು ಕೀರ್ತಿಸುವುದು ಯುಕ್ತವಾಗಿದೆ.

2ಯೆಹೋವನು ಯೆರೂಸಲೇಮನ್ನು ಕಟ್ಟಿಸುತ್ತಿದ್ದಾನೆ, ಚದರಿಹೋಗಿದ್ದ ಇಸ್ರಾಯೇಲರನ್ನು ಕೂಡಿಸುತ್ತಿದ್ದಾನೆ,

3ಮುರಿದ ಮನಸ್ಸುಳ್ಳವರನ್ನು ವಾಸಿಮಾಡುತ್ತಾನೆ, ಅವರ ಗಾಯಗಳನ್ನು ಕಟ್ಟುತ್ತಾನೆ.

4ಅವನು ನಕ್ಷತ್ರಗಳ ಸಂಖ್ಯೆಯನ್ನು ಗೊತ್ತುಮಾಡಿ, ಪ್ರತಿಯೊಂದಕ್ಕೂ ಹೆಸರಿಟ್ಟಿದ್ದಾನೆ.

5ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.

6ಯೆಹೋವನು ದೀನರಿಗೆ ಆಧಾರವಾಗಿದ್ದಾನೆ, ದುಷ್ಟರನ್ನು ನೆಲಕ್ಕೆ ಹಾಕಿ ತುಳಿದುಬಿಡುತ್ತಾನೆ.

7ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ, ಕಿನ್ನರಿಯೊಡನೆ ನಮ್ಮ ದೇವರನ್ನು ಕೊಂಡಾಡಿರಿ.

8ಆತನು ಆಕಾಶದಲ್ಲಿ ಮೋಡಗಳನ್ನು ಕವಿಸುತ್ತಾನೆ, ಭೂಮಿಗೋಸ್ಕರ ಮಳೆಯನ್ನು ಸಿದ್ಧಮಾಡುತ್ತಾನೆ, ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾನೆ.

9ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.

10ಕುದುರೆಯ ಶಕ್ತಿಯಲ್ಲಿ ಆತನಿಗೆ ಇಷ್ಟವಿಲ್ಲ, ಆಳಿನ ತೊಡೆಯ ಬಲವನ್ನು ಆತನು ಮೆಚ್ಚುವುದಿಲ್ಲ.

11ಯೆಹೋವನು ಆನಂದಿಸುವುದು ತನ್ನ ಕೃಪೆಯನ್ನು ನಿರೀಕ್ಷಿಸುವ ಭಕ್ತರಲ್ಲೇ.

12ಯೆರೂಸಲೇಮೇ, ಯೆಹೋವನನ್ನು ಕೀರ್ತಿಸು, ಚೀಯೋನೇ, ನಿನ್ನ ದೇವರನ್ನು ಸ್ತುತಿಸು.

13ಆತನು ನಿನ್ನ ಹೆಬ್ಬಾಗಿಲುಗಳ ಅಗುಳಿಗಳನ್ನು ಬಲಪಡಿಸಿದ್ದಾನೆ, ನಿನ್ನ ಮಕ್ಕಳನ್ನು ಆಶೀರ್ವದಿಸಿದ್ದಾನೆ.

14ಆತನು ನಿನ್ನ ಪ್ರಾಂತ್ಯದೊಳಗೆ ಸೌಭಾಗ್ಯವನ್ನು ಉಂಟುಮಾಡುತ್ತಾನೆ, ಶ್ರೇಷ್ಠವಾದ ಗೋದಿಯಿಂದ ನಿನ್ನನ್ನು ತೃಪ್ತಿಗೊಳಿಸುತ್ತಾನೆ.

15ತನ್ನ ನುಡಿಯನ್ನು ಭೂಲೋಕಕ್ಕೆ ಕಳುಹಿಸುತ್ತಾನೆ, ಆತನ ವಾಕ್ಯವು ಬಹು ವೇಗಶಾಲಿಯಾಗಿದೆ.

16ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ.

17ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ, ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?

18ಆತನು ಅಪ್ಪಣೆಕೊಡಲು ಅವು ಕರಗುತ್ತವೆ, ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.

19ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.

20ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath