ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 149

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನಿಗೆ ಸ್ತೋತ್ರ! ಯೆಹೋವನಿಗೆ ನೂತನ ಕೀರ್ತನೆಯನ್ನು ಹಾಡಿರಿ; ಭಕ್ತರ ಸಭೆಯಲ್ಲಿ ಆತನನ್ನು ಸ್ತುತಿಸಿರಿ.

2ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.

3ಕುಣಿಯುತ್ತಾ ಆತನ ನಾಮವನ್ನು ಕೀರ್ತಿಸಲಿ; ದಮ್ಮಡಿ, ಕಿನ್ನರಿಗಳಿಂದ ಆತನನ್ನು ಭಜಿಸಲಿ.

4ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.

5ಭಕ್ತರು ತಮಗುಂಟಾದ ಮಹಿಮೆಯಲ್ಲಿ ಹಿಗ್ಗಲಿ; ಹಾಸಿಗೆಯ ಮೇಲಿರುವಾಗಲೂ ಉತ್ಸಾಹಧ್ವನಿ ಮಾಡಲಿ.

6ಅವರ ಬಾಯಲ್ಲಿ ಯೆಹೋವನ ಸ್ತೋತ್ರವೂ, ಕೈಯಲ್ಲಿ ಇಬ್ಬಾಯಿಕತ್ತಿಯೂ ಇರಲಿ.

7ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;

8ಅವರ ರಾಜರನ್ನು ಸಂಕೋಲೆಯಿಂದ ಬಂಧಿಸುವರು; ಪ್ರಭುಗಳಿಗೆ ಕಬ್ಬಿಣದ ಬೇಡಿಗಳನ್ನು ಹಾಕುವರು.

9ಲಿಖಿತದಂತೆ ಅವರಿಗೆ ಶಿಕ್ಷೆಯನ್ನು ವಿಧಿಸುವರು; ಇದು ಆತನ ಭಕ್ತರೆಲ್ಲರಿಗೆ ಗೌರವವಾಗಿರುವುದು. ಯೆಹೋವನಿಗೆ ಸ್ತೋತ್ರ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath