ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 150

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ.

2ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ; ಆತನ ಮಹಾಪ್ರಭಾವಕ್ಕೆ ಸರಿಯಾಗಿ ಆತನನ್ನು ಸ್ತುತಿಸಿರಿ.

3ಕೊಂಬೂದುತ್ತಾ ಆತನನ್ನು ಸ್ತುತಿಸಿರಿ; ಸ್ವರಮಂಡಲ, ಕಿನ್ನರಿಗಳಿಂದ ಆತನನ್ನು ಸ್ತುತಿಸಿರಿ.

4ದಮ್ಮಡಿಯನ್ನು ಬಡಿಯುತ್ತಾ, ಕುಣಿಯುತ್ತಾ ಆತನನ್ನು ಸ್ತುತಿಸಿರಿ; ತಂತಿವಾದ್ಯಗಳಿಂದಲೂ, ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ.

5ತಾಳದಿಂದ ಆತನನ್ನು ಸ್ತುತಿಸಿರಿ; ಝಲ್ಲರಿಯಿಂದ ಆತನನ್ನು ಸ್ತುತಿಸಿರಿ.

6ಶ್ವಾಸವಿರುವ ಎಲ್ಲವೂ ಯೆಹೋವನನ್ನು ಸ್ತುತಿಸಲಿ; ಯೆಹೋವನಿಗೆ ಸ್ತೋತ್ರ!

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath