ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 16

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರೇ, ನಾನು ನಿನ್ನ ಶರಣಾಗತನು; ನನ್ನನ್ನು ಕಾಪಾಡು.

2ನಾನು ಯೆಹೋವನನ್ನು ಕುರಿತು, “ನೀನೇ ನನ್ನ ಒಡೆಯನು; ನನ್ನ ಸುಖವು ನಿನ್ನಲ್ಲಿಯೇ ಹೊರತು ಬೇರೆ ಇಲ್ಲ” ಎಂದು ಹೇಳುವೆನು.

3ಭೂಲೋಕದಲ್ಲಿರುವ ದೇವಜನರ ವಿಷಯದಲ್ಲಿ, “ಇವರೇ ಶ್ರೇಷ್ಠರು, ಇವರೇ ನನಗೆ ಇಷ್ಟರಾದವರು” ಎಂದು ಹೇಳುವೆನು.

4ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.

5ನನ್ನ ಪಾಲೂ, ನನ್ನ ಪಾನವೂ ಯೆಹೋವನೇ, ನೀನೇ ನನ್ನ ಸ್ವತ್ತನ್ನು ಭದ್ರಗೊಳಿಸುತ್ತೀ.

6ನನಗೆ ಪ್ರಾಪ್ತವಾಗಿರುವ ಸ್ವತ್ತು ರಮಣೀಯವಾದದ್ದು; ಅದು ನನಗೆ ಸಂತೃಪ್ತಿಕರವಾಗಿದೆ.

7ಯೆಹೋವನು ನನಗೆ ಆಲೋಚನೆಯನ್ನು ಹೇಳಿಕೊಡುತ್ತಾನೆ; ನಾನು ಆತನನ್ನು ಕೊಂಡಾಡುವೆನು. ರಾತ್ರಿಯ ಸಮಯಗಳಲ್ಲಿ ನನ್ನ ಅಂತರಾತ್ಮವು ನನ್ನನ್ನು ಬೋಧಿಸುತ್ತದೆ.

8ನಾನು ಯೆಹೋವನನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ; ಆತನು ನನ್ನ ಬಲಗಡೆಯಲ್ಲಿ ಇರುವುದರಿಂದ ನಾನು ಎಂದಿಗೂ ಕದಲುವುದಿಲ್ಲ.

9ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವುದು.

10ಏಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವುದಿಲ್ಲ; ನಿನ್ನ ಭಕ್ತನಿಗೆ ಅಧೋಲೋಕವನ್ನು ನೋಡಗೊಡಿಸುವುದಿಲ್ಲ.

11ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತ ಭಾಗ್ಯವಿದೆ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath