ಕೀರ್ತನೆಗಳು 21
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನೇ, ನಿನ್ನ ಪರಾಕ್ರಮದಲ್ಲಿ ಅರಸನು ಸಂತೋಷಿಸುತ್ತಾನೆ; ನೀನು ಉಂಟುಮಾಡಿದ ಜಯಕ್ಕಾಗಿ ಎಷ್ಟೋ ಆನಂದಪಡುತ್ತಾನೆ.
2ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ
3ನಾನಾ ಶುಭಗಳೊಡನೆ ನೀನೇ ಅವನನ್ನು ಎದುರುಗೊಂಡಿಯಲ್ಲಾ; ಅವನ ತಲೆಯ ಮೇಲೆ ಸುವರ್ಣ ಕಿರೀಟವನ್ನು ಇಟ್ಟಿದ್ದೀ.
4ಅವನು ದೀರ್ಘಾಯುಷ್ಯವನ್ನು ಬೇಡಿಕೊಳ್ಳಲು, ನೀನು ಅವನಿಗೆ ಯುಗಯುಗಾಂತರಗಳ ಆಯುಷ್ಯವನ್ನು ಅನುಗ್ರಹಿಸಿದ್ದೀ.
5ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.
6ಅವನಿಗೆ ಶಾಶ್ವತವಾದ ಸೌಭಾಗ್ಯನಿಧಿಯನ್ನು ದಯಪಾಲಿಸಿದ್ದೀ; ಅವನನ್ನು ನಿನ್ನ ಸನ್ನಿಧಿಯಲ್ಲಿ ಅತ್ಯಾನಂದಪಡಿಸಿದ್ದೀ.
7ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.
8ಶತ್ರುಗಳೆಲ್ಲರು ನಿನಗೆ ಸಿಕ್ಕುವರು; ಭುಜಬಲದಿಂದ ನಿನ್ನ ಹಗೆಗಳನ್ನು ಹಿಡಿಯುವಿ.
9ನೀನು ಪ್ರತ್ಯಕ್ಷನಾಗುವಾಗ ಉರಿಯುವ ಕುಲುಮೆಯಂತಿದ್ದು ಅವರನ್ನು ಬೂದಿ ಮಾಡುವಿ. ಯೆಹೋವನು ಮಹಾಕೋಪದಿಂದ ಅವರನ್ನು ನಾಶ ಮಾಡುವನು; ಆತನ ಕೋಪಾಗ್ನಿ ಅವರನ್ನು ದಹಿಸಿಬಿಡುವುದು.
10ನೀನು ಅವರನ್ನು ಸಂಹರಿಸಿ, ಭೂಮಿಯ ಮೇಲೆ ಅವರ ಸಂತತಿಯೇ ಇಲ್ಲದಂತೆ ಮಾಡುವಿ; ಅವರ ವಂಶದವರು ಮನುಷ್ಯರೊಳಗೆ ಉಳಿಯುವುದೇ ಇಲ್ಲ.
11ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.
12ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ.
13ಯೆಹೋವನೇ, ಪರಾಕ್ರಮದಿಂದ ನಿನ್ನನ್ನು ಘನಪಡಿಸಿಕೋ; ನಾವು ಗಾಯನಮಾಡುತ್ತಾ ನಿನ್ನ ಶೂರತ್ವವನ್ನು ಕೊಂಡಾಡುವೆವು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath