ಕೀರ್ತನೆಗಳು 23
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನು ನನಗೆ ಕುರುಬನು; ಕೊರತೆಪಡೆನು.
2ಆತನು ಹಸಿರುಗಾವಲುಗಳಲ್ಲಿ ನನ್ನನ್ನು ತಂಗಿಸುತ್ತಾನೆ; ವಿಶ್ರಾಂತಿಕರವಾದ ನೀರುಗಳ ಬಳಿಗೆ ಬರಮಾಡುತ್ತಾನೆ.
3ನನ್ನ ಪ್ರಾಣವನ್ನು ಉಜ್ಜೀವಿಸಮಾಡಿ ತನ್ನ ಹೆಸರಿಗೆ ತಕ್ಕಂತೆ ನೀತಿಯ ಮಾರ್ಗದಲ್ಲಿ ನನ್ನನ್ನು ನಡೆಸುತ್ತಾನೆ.
4ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.
5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
6ನಿಶ್ಚಯವಾಗಿ ನನ್ನ ಜೀವಮಾನದಲ್ಲೆಲ್ಲಾ ಶುಭವೂ ಮತ್ತು ಕೃಪೆಯೂ ನನ್ನನ್ನು ಹಿಂಬಾಲಿಸುವವು. ನಾನು ಸದಾಕಾಲವೂ ಯೆಹೋವನ ಮಂದಿರದಲ್ಲಿ ವಾಸಿಸುವೆನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath