ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 24

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ.

2ಆತನೇ ಅದರ ಅಸ್ತಿವಾರವನ್ನು ಸಾಗರದ ಮೇಲೆ ಹಾಕಿದವನು; ಅದನ್ನು ಜಲರಾಶಿಗಳ ಮೇಲೆ ಸ್ಥಿರಪಡಿಸಿದವನು ಆತನೇ.

3ಯೆಹೋವನ ಪರ್ವತವನ್ನು ಹತ್ತತಕ್ಕವನು ಯಾರು? ಆತನ ಪವಿತ್ರಸ್ಥಾನದಲ್ಲಿ ಪ್ರವೇಶಿಸುವುದಕ್ಕೆ ಎಂಥವನು ಯೋಗ್ಯನು?

4ಯಾರು ಅಯೋಗ್ಯಕಾರ್ಯಗಳಲ್ಲಿ ಮನಸ್ಸಿಡದೆ, ಮೋಸ ಪ್ರಮಾಣಮಾಡದೆ, ಶುದ್ಧಹಸ್ತವೂ, ನಿರ್ಮಲಮನಸ್ಸೂ ಉಳ್ಳವನಾಗಿದ್ದಾನೋ,

5ಅವನೇ ಯೆಹೋವನಿಂದ ಶುಭವನ್ನು ಹೊಂದುವನು; ತನ್ನ ರಕ್ಷಕನಾದ ದೇವರಿಂದ ನೀತಿಫಲವನ್ನು ಪಡೆಯುವನು.

6ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ

7ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.

8ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.

9ದ್ವಾರಗಳೇ, ಉನ್ನತವಾಗಿರ್ರಿ! ಪುರಾತನವಾದ ಕದಗಳೇ, ತೆರೆದುಕೊಂಡಿರ್ರಿ! ಮಹಾಮಹಿಮೆಯುಳ್ಳ ಅರಸನು ಆಗಮಿಸುತ್ತಾನೆ.

10ಮಹಾಮಹಿಮೆಯುಳ್ಳ ಈ ಅರಸನು ಯಾರು? ಸೇನಾಧೀಶ್ವರನಾದ ಯೆಹೋವನೇ, ಮಹಾಮಹಿಮೆಯುಳ್ಳ ಅರಸನು ಈತನೇ. ಸೆಲಾ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath