ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 26

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.

2ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.

3ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.

4ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.

5ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.

6ಯೆಹೋವನೇ, ನಾನು ನಿರ್ದೋಷಿ ಎಂದು, ಕೈಗಳನ್ನು ತೊಳೆದುಕೊಂಡವನಾಗಿ,

7ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.

8ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.

9ಪಾಪಿಷ್ಠರ ಪ್ರಾಣದ ಸಂಗಡ ನನ್ನ ಪ್ರಾಣವನ್ನೂ ತೆಗೆಯಬೇಡ; ಕೊಲೆಪಾತಕರ ಜೀವದೊಂದಿಗೆ ನನ್ನ ಜೀವವನ್ನೂ ತೆಗೆಯಬೇಡ.

10ಅವರ ಕೈಗಳು ಬಲಾತ್ಕಾರ ನಡೆಸುತ್ತವೆ; ಅವರ ಬಲಗೈ ಲಂಚದಿಂದ ತುಂಬಿದೆ.

11ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.

12ನನ್ನ ಪಾದವು ಸಮಭೂಮಿಯಲ್ಲಿ ನಿಂತಿದೆ; ಕೂಡಿದ ಸಭೆಯಲ್ಲಿ ಯೆಹೋವನನ್ನು ಕೊಂಡಾಡುವೆನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath