ಕೀರ್ತನೆಗಳು 28
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.
2ನೀನು ವಾಸಿಸುವ ಮಹಾಪರಿಶುದ್ಧಸ್ಥಾನದ ಕಡೆಗೆ ನಾನು ಕೈಯೆತ್ತಿ ಮೊರೆಯಿಡುತ್ತೇನಲ್ಲಾ; ನನ್ನ ವಿಜ್ಞಾಪನೆಯನ್ನು ಲಾಲಿಸು.
3ನೀನು ದುಷ್ಟರೊಡನೆಯೂ, ದುರ್ಜನಗಳ ಸಂಗಡಲೂ ನನ್ನನ್ನೂ ಎಳೆದುಕೊಂಡು ಹೋಗಬೇಡ. ಅವರು ಹೊರಗೆ ಒಳ್ಳೆಯದಾಗಲಿ ಎಂದು ಹೇಳಿದರೂ, ಒಳಗೆ ಕೇಡಾಗಲಿ ಎಂದು ಯೋಚಿಸುವವರು.
4ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.
5ಅವರು ಯೆಹೋವನ ಕಾರ್ಯಗಳನ್ನೂ ಮತ್ತು ಆತನ ಕೈಕೆಲಸಗಳನ್ನೂ ವಿವೇಚಿಸಿ ತಿಳಿದುಕೊಳ್ಳದೆ ಹೋದರು; ಆದುದರಿಂದ ಆತನು ಅವರನ್ನು ಹಾಳುಮಾಡುವನೇ ಹೊರತು ವೃದ್ಧಿಪಡಿಸುವುದಿಲ್ಲ.
6ಯೆಹೋವನು ನನ್ನ ವಿಜ್ಞಾಪನೆಗಳನ್ನು ಕೇಳಿದ್ದಾನೆ; ಆತನಿಗೆ ಸ್ತೋತ್ರವಾಗಲಿ.
7ಯೆಹೋವನು ನನಗೆ ಬಲವೂ, ಗುರಾಣಿಯೂ ಆಗಿದ್ದಾನೆ; ನಾನು ಆತನಲ್ಲಿ ಭರವಸವಿಟ್ಟೆನು, ನನಗೆ ಸಹಾಯವು ಉಂಟಾಯಿತು. ಆದಕಾರಣ ನನ್ನ ಹೃದಯವು ಹರ್ಷಿಸುವುದು; ಕೀರ್ತನಾರೂಪವಾಗಿ ಆತನನ್ನು ಸ್ತುತಿಸುವೆನು.
8ಯೆಹೋವನು ತನ್ನ ಜನರಿಗೆ ಬಲವೂ, ತಾನು ಅಭಿಷೇಕಿಸಿದವನಿಗೆ ಆಶ್ರಯದುರ್ಗವೂ ಆಗಿದ್ದಾನೆ.
9ಯೆಹೋವನೇ, ನಿನ್ನ ಜನರನ್ನು ರಕ್ಷಿಸು; ನಿನ್ನ ಸ್ವಕೀಯ ಪ್ರಜೆಯನ್ನು ಆಶೀರ್ವದಿಸು. ನೀನು ಅವರ ಕುರುಬನಾಗಿರು; ಅವರನ್ನು ಯಾವಾಗಲೂ ಪರಿಪಾಲಿಸುತ್ತಾ ಆಧಾರವಾಗಿರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath