ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 29

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವದೂತರುಗಳಿರಾ, ಪರಮಪ್ರಭಾವವು, ಯೆಹೋವನದೇ, ಯೆಹೋವನದೇ ಎಂದು ಹೇಳಿ ಕೊಂಡಾಡಿರಿ.

2ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ.

3ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.

4ಯೆಹೋವನ ಧ್ವನಿಯು ಎಷ್ಟೋ ಬಲವುಳ್ಳದ್ದು, ಎಷ್ಟೋ ಗಂಭೀರವಾದದ್ದು.

5ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.

6ಲೆಬನೋನ್ ಪರ್ವತವು ಕರುವಿನೋಪಾದಿಯಲ್ಲಿಯೂ, ಸಿರ್ಯೋನ್ ಬೆಟ್ಟವು ಕಾಡುಕೋಣದ ಮರಿಯಂತೆಯೂ ಹಾರಾಡುವ ಹಾಗೆ ಮಾಡುತ್ತಾನೆ.

7ಯೆಹೋವನ ಗರ್ಜನೆಗೆ ಮಿಂಚುಗಳು ಥಳಥಳನೆ ಹೊಳೆಯುತ್ತವೆ.

8ಯೆಹೋವನ ಗರ್ಜನೆಗೆ ಕಾಡು ಹೊರಳಾಡುತ್ತದೆ; ಕಾದೇಶ್ ಅರಣ್ಯವು ಕಂಪಿಸುತ್ತದೆ.

9ಯೆಹೋವನ ಗರ್ಜನೆಯು ದೇವದಾರು ಮರಗಳನ್ನು ಕದಲಿಸುತ್ತದೆ; ಕಾಡಿನ ಮರಗಳು ಬರಿದಾಗುತ್ತವೆ. ಆಗ ಆತನ ಮಂದಿರದಲ್ಲಿರುವವರೆಲ್ಲರು, “ಎಷ್ಟೋ ಪ್ರಭಾವ!” ಎನ್ನುತ್ತಾರೆ.

10ಯೆಹೋವನು ಜಲಪ್ರಳಯದಲ್ಲಿ ಆಸೀನನಾಗಿರುವನು; ಆತನು ಸದಾಕಾಲವೂ ಅರಸನಾಗಿ ಕುಳಿತಿರುವನು.

11ಯೆಹೋವನು ತನ್ನ ಜನರಿಗೆ ಬಲವನ್ನು ಅನುಗ್ರಹಿಸುವನು; ಆತನು ತನ್ನ ಪ್ರಜೆಗೆ ಸುಕ್ಷೇಮವನ್ನು ದಯಪಾಲಿಸುವನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath