ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 33

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನೀತಿವಂತರೇ, ಯೆಹೋವನ ವಿಷಯದಲ್ಲಿ ಉಲ್ಲಾಸಪಡಿರಿ; ಯಥಾರ್ಥಚಿತ್ತರು ಆತನನ್ನು ಸ್ತುತಿಸುವುದು ಯುಕ್ತವಾಗಿದೆ.

2ಕಿನ್ನರಿಯನ್ನು ನುಡಿಸುತ್ತಾ ಯೆಹೋವನನ್ನು ಕೊಂಡಾಡಿರಿ; ಹತ್ತುತಂತಿಗಳ ಸ್ವರಮಂಡಲವನ್ನು ನುಡಿಸುತ್ತಾ ಸಂಕೀರ್ತಿಸಿರಿ.

3ಆತನ ಘನಕ್ಕಾಗಿ ನೂತನ ಕೀರ್ತನೆಯನ್ನು ಹಾಡಿರಿ; ಉತ್ಸಾಹಧ್ವನಿಯೊಡನೆ ಇಂಪಾಗಿ ಬಾರಿಸಿರಿ.

4ಯೆಹೋವನ ವಚನವು ಯಥಾರ್ಥವಾದದ್ದು; ಆತನ ಕೃತ್ಯವೆಲ್ಲಾ ನಂಬಿಕೆಯುಳ್ಳದ್ದಾಗಿವೆ.

5ಆತನು ನೀತಿ ಮತ್ತು ನ್ಯಾಯಗಳನ್ನು ಪ್ರೀತಿಸುವವನು; ಭೂಲೋಕವೆಲ್ಲಾ ಯೆಹೋವನ ಕೃಪೆಯಿಂದ ತುಂಬಿದೆ.

6ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.

7ನೀರುಗಳನ್ನು ಒಟ್ಟುಗೂಡಿಸಿ ಸಮುದ್ರವನ್ನು ಮಾಡಿದವನು ಆತನೇ; ಭೂಮಿಯ ಕೆಳಗೆ ಜಲಾಶಯಗಳನ್ನು ಇಟ್ಟವನು ಆತನೇ.

8ಭೂಲೋಕದವರೆಲ್ಲರೂ ಯೆಹೋವನಿಗೆ ಭಯಪಡಲಿ; ಭೂನಿವಾಸಿಗಳೆಲ್ಲರೂ ಆತನಿಗೆ ಹೆದರಲಿ.

9ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.

10ಯೆಹೋವನು ಅನ್ಯಜನರ ಸಂಕಲ್ಪಗಳನ್ನು ವ್ಯರ್ಥಮಾಡುತ್ತಾನೆ; ಅವರ ಯೋಚನೆಗಳನ್ನು ನಿಷ್ಫಲಮಾಡುತ್ತಾನೆ.

11ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವುದು; ಆತನ ಸಂಕಲ್ಪವು ಎಂದಿಗೂ ಕದಲುವುದಿಲ್ಲ.

12ಯಾರಿಗೆ ಯೆಹೋವನೇ ದೇವರಾಗಿದ್ದಾನೋ, ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.

13ಯೆಹೋವನು ಆಕಾಶದಿಂದ ಮನುಷ್ಯರೆಲ್ಲರನ್ನು ನೋಡುತ್ತಾನೆ;

14ತಾನಿರುವ ಸ್ಥಾನದಿಂದ ಭೂನಿವಾಸಿಗಳೆಲ್ಲರನ್ನು ದೃಷ್ಟಿಸುತ್ತಾನೆ.

15ಅವರೆಲ್ಲರ ಹೃದಯಗಳನ್ನು ನಿರ್ಮಿಸಿದವನೂ, ಅವರ ಕೃತ್ಯಗಳನ್ನೆಲ್ಲಾ ವಿವೇಚಿಸುವವನೂ ಆತನೇ.

16ಮಹಾ ಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವುದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದಿಂದ ಸುರಕ್ಷಿತನಾಗುವುದಿಲ್ಲ.

17ಜೀವದ ರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು.

18ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ.

19ಅವರ ಪ್ರಾಣವನ್ನು ಮರಣದಿಂದ ತಪ್ಪಿಸುವನು; ಬರಗಾಲದಲ್ಲಿ ಅವರ ಜೀವವನ್ನು ಉಳಿಸುವನು.

20ನಮ್ಮ ಮನಸ್ಸು ಯೆಹೋವನಿಗೋಸ್ಕರ ಕಾದಿದೆ; ನಮ್ಮ ಸಹಾಯವೂ, ಗುರಾಣಿಯೂ ಆತನೇ.

21ಆತನಲ್ಲಿ ನಮ್ಮ ಹೃದಯವು ಸಂತೋಷಿಸುವುದು; ಆತನ ಪರಿಶುದ್ಧನಾಮದಲ್ಲಿ ಭರವಸವಿಟ್ಟಿದ್ದೇವೆ.

22ಯೆಹೋವನೇ, ನಾವು ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ; ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath