ಕೀರ್ತನೆಗಳು 36
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.
2ಅದು ಅವನನ್ನು ವಂಚಿಸಿ, “ನಿನ್ನ ದ್ರೋಹವು ಬೈಲಿಗೆ ಬರುವುದಿಲ್ಲ ಮತ್ತು ನಿನಗೆ ಕೇಡು ತರುವುದಿಲ್ಲ” ಎಂದು ಊದಿಬಿಡುತ್ತದೆ.
3ಅವನ ಬಾಯಿಂದ ಕೆಡುಕೂ, ವಂಚನೆಯೂ ಬರುತ್ತವೆ; ವಿವೇಕಮಾರ್ಗವನ್ನೂ, ಪರಹಿತವನ್ನೂ ಬಿಟ್ಟೇಬಿಟ್ಟಿದ್ದಾನೆ.
4ಹಾಸಿಗೆಯ ಮೇಲೆ ಇರುವಾಗಲೂ ಕೆಡುಕನ್ನೇ ಯೋಚಿಸುತ್ತಿರುವನು; ದುಷ್ಟ ಮಾರ್ಗದಲ್ಲಿ ನಿಂತುಕೊಂಡಿದ್ದಾನೆ; ಎಂಥ ದುಷ್ಕೃತ್ಯಕ್ಕೂ ಹೇಸುವುದಿಲ್ಲ.
5ಯೆಹೋವನೇ, ನಿನ್ನ ಪ್ರೀತಿಯು ಆಕಾಶದಷ್ಟು ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೇಘಮಾರ್ಗವನ್ನು ಮುಟ್ಟುತ್ತದೆ.
6ನಿನ್ನ ನೀತಿಯು ದಿವ್ಯಪರ್ವತಗಳಂತೆಯೂ, ನಿನ್ನ ನ್ಯಾಯವು ಮಹಾಸಾಗರದಂತೆಯೂ ಇವೆ; ಯೆಹೋವನೇ, ನೀನು ಮನುಷ್ಯರನ್ನೂ, ಮೃಗಗಳನ್ನೂ ಸಂರಕ್ಷಿಸುತ್ತೀ.
7ದೇವರೇ, ನಿನ್ನ ಪ್ರೀತಿ ಎಷ್ಟೋ ಅಮೂಲ್ಯವಾದದ್ದು; ಮಾನವರು ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುತ್ತಾರೆ.
8ನಿನ್ನ ಮಂದಿರದ ಸಮೃದ್ಧಿಯಿಂದ ಅವರನ್ನು ಸಂತೃಪ್ತಿಪಡಿಸುತ್ತೀ; ನಿನ್ನ ಸಂಭ್ರಮಪ್ರವಾಹದಲ್ಲಿ ಅವರಿಗೆ ಪಾನಮಾಡಿಸುತ್ತೀ.
9ನಿನ್ನ ಬಳಿಯಲ್ಲಿ ಜೀವದ ಬುಗ್ಗೆ ಉಂಟಲ್ಲಾ; ನಿನ್ನ ತೇಜಸ್ಸು ನಮಗೆ ಬೆಳಕು ಕೊಡುತ್ತದೆ.
10ನಿನ್ನನ್ನು ಅರಿತವರಿಗೆ ನಿನ್ನ ಪ್ರೀತಿಯನ್ನು ಯಾವಾಗಲೂ ದಯಪಾಲಿಸು; ಯಥಾರ್ಥಚಿತ್ತರಿಗೆ ನಿನ್ನ ನ್ಯಾಯವನ್ನು ನಿರಂತರವೂ ಅನುಗ್ರಹಿಸು.
11ಗರ್ವಿಷ್ಠರ ಕಾಲಕೆಳಗೆ ನಮ್ಮನ್ನು ಬೀಳಿಸಬೇಡ; ದುರ್ಜನರಿಂದ ನಾವು ದೇಶಭ್ರಷ್ಟರಾಗದಂತೆ ಮಾಡು.
12ಇಗೋ, ಕೆಡುಕರು ಕೆಡವಲ್ಪಟ್ಟು ಏಳಲಾರದೆ ಬಿದ್ದಿದ್ದಾರೆ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath