ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 38

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

2ನಿನ್ನ ಬಾಣಗಳು ನನ್ನೊಳಗೆ ಹೊಕ್ಕಿವೆ; ನಿನ್ನ ಶಿಕ್ಷಾಹಸ್ತವು ನನ್ನ ಮೇಲೆ ಭಾರವಾಗಿದೆ.

3ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.

4ನನ್ನ ಅಪರಾಧಗಳು ನನ್ನನ್ನು ಮುಳುಗಿಸಿಬಿಟ್ಟಿವೆ; ಅವು ಹೊರಲಾರದಷ್ಟು ಭಾರವಾದ ಹೊರೆಯಂತಿವೆ.

5ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ.

6ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ; ಯಾವಾಗಲೂ ದುಃಖದಿಂದ ವಿಕಾರಿಯಾಗಿ ಅಲೆಯುತ್ತೇನೆ.

7ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ.

8ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.

9ಕರ್ತನೇ, ನನ್ನ ಅಪೇಕ್ಷೆ ನಿನಗೆ ಗೊತ್ತುಂಟು; ನನ್ನ ನಿಟ್ಟುಸಿರು ನಿನಗೆ ಮರೆಯಾಗಿಲ್ಲ.

10ನನ್ನ ಹೃದಯವು ಬಡಿದುಕೊಳ್ಳುತ್ತಿದೆ; ನನ್ನ ಚೈತನ್ಯವು ಕುಗ್ಗಿಹೋಯಿತು; ನನ್ನ ಕಣ್ಣುಗಳೂ ಮೊಬ್ಬಾಗಿ ಹೋದವು.

11ನನ್ನ ಆಪ್ತಸ್ನೇಹಿತರು ಮತ್ತು ಜೊತೆಗಾರರು, ನನ್ನ ರೋಗವನ್ನು ನೋಡಿ ಓರೆಯಾಗಿ ಹೋಗುತ್ತಾರೆ; ನನ್ನ ಬಂಧುಗಳು ದೂರ ನಿಲ್ಲುತ್ತಾರೆ.

12ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.

13ನಾನಂತೂ ಕಿವುಡನಂತೆ ಕೇಳದವನಾಗಿದ್ದೇನೆ; ಮೂಕನಂತೆ ಬಾಯಿ ತೆರೆಯುವುದೇ ಇಲ್ಲ.

14ನಾನು ಕಿವಿ ಕೇಳಿಸದವನಂತೆಯೂ, ಪ್ರತ್ಯುತ್ತರ ಕೊಡಲಾರದವನಂತೆಯೂ ಆದೆನು.

15ಯೆಹೋವನೇ, ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನನ್ನ ಕರ್ತನೇ, ನನ್ನ ದೇವರೇ, ನೀನೇ ಸದುತ್ತರವನ್ನು ಕೊಡುವವನು.

16“ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು.

17ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ.

18ನಾನು ಅಪರಾಧಿಯೇ ಎಂದು ಒಪ್ಪಿಕೊಳ್ಳುತ್ತೇನೆ; ನನ್ನ ಪಾಪದ ದೆಸೆಯಿಂದಲೇ ನನಗೆ ವ್ಯಸನವುಂಟಾಯಿತು.

19ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ.

20ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.

21ಯೆಹೋವನೇ, ಕೈ ಬಿಡಬೇಡ; ನನ್ನ ದೇವರೇ, ದೂರವಾಗಿರಬೇಡ.

22ನನ್ನ ಕರ್ತನೇ, ನನ್ನ ರಕ್ಷಕನೇ, ಬೇಗ ಬಂದು ಸಹಾಯಮಾಡು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath