ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 39

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1“ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.

2ನಾನು ಮೌನವಾಗಿದ್ದೆನು; ಒಳ್ಳೆಯದನ್ನಾದರೂ ಆಡದೆ ಸುಮ್ಮನಿದ್ದೆನು; ಆದರೆ ನನ್ನ ಸಂಕಟವು ಹೆಚ್ಚಿತು.

3ನನ್ನ ಹೃದಯವು ಆತಂಕದಿಂದ ಕೂಡಿತ್ತು; ನಾನು ಹೆಚ್ಚಾಗಿ ಯೋಚಿಸುತ್ತಿರುವಲ್ಲಿ ತಾಪ ಹೆಚ್ಚಿತು. ಆಗ ನಾನು ಬಾಯಿ ಬಿಟ್ಟು,

4“ಯೆಹೋವನೇ, ನನಗೆ ಅವಸಾನವುಂಟೆಂದೂ, ನನ್ನ ಜೀವಮಾನವು ಅತ್ಯಲ್ಪವೆಂದೂ, ನಾನು ಎಷ್ಟೋ ಅಸ್ಥಿರನೆಂದೂ ನನಗೆ ತಿಳಿಯಪಡಿಸು.

5ನನ್ನ ಆಯುಷನ್ನು ಗೇಣುದ್ದವಾಗಿ ಮಾಡಿದ್ದೀಯಲ್ಲಾ; ನನ್ನ ಜೀವಿತಕಾಲ ನಿನ್ನ ಎಣಿಕೆಯಲ್ಲಿ ಏನೂ ಅಲ್ಲ” ಅಂದೆನು. ಮನುಷ್ಯನೆಂಬವನು ಎಷ್ಟು ಸ್ಥಿರನೆಂದು ಕಂಡರೂ ಬರಿ ಉಸಿರೇ. ಸೆಲಾ

6ನರರು ಮಾಯಾರೂಪವಾದ ನೆರಳಿನಂತೆ ಸಂಚರಿಸುವವರು; ಅವರು ಸುಮ್ಮಸುಮ್ಮನೆ ಗಡಿಬಿಡಿಮಾಡುವವರು; ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತಾರೆ, ಆದರೆ ಅದು ಯಾರ ಪಾಲಾಗುವುದೋ ತಾವೇ ತಿಳಿಯರು.

7“ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವುದಕ್ಕೆ ಕಾದುಕೊಳ್ಳಲಿ? ನೀನೇ ನನ್ನ ನಿರೀಕ್ಷೆ.

8ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡುಗಡೆಮಾಡು; ಮೂರ್ಖರ ನಿಂದೆಗೆ ಗುರಿಮಾಡಬೇಡ.

9ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.

10ನಿನ್ನ ದಂಡನೆಯನ್ನು ತೊಲಗಿಸು; ನಿನ್ನ ಕೈಹೊಡೆತದಿಂದ ಸಾಯುವ ಹಾಗಿದ್ದೇನಲ್ಲಾ.

11ನೀನು ನರನನ್ನು ಪಾಪದ ನಿಮಿತ್ತ ಗದರಿಸಿ ಶಿಕ್ಷಿಸುವಾಗ, ಅವನ ಚೆಲುವಿಕೆಯು ನುಸಿ ಹತ್ತಿತೋ ಎಂಬಂತೆ ಹಾಳಾಗಿ ಹೋಗುತ್ತದೆ. ಮನುಷ್ಯನೆಂಬವನು ಬರಿ ಉಸಿರೇ. ಸೆಲಾ

12ಯೆಹೋವನೇ, ನನ್ನ ಪ್ರಾರ್ಥನೆಯನ್ನು ಲಾಲಿಸು; ನನ್ನ ಮೊರೆಗೆ ಕಿವಿಗೊಡು. ನನ್ನ ಕಣ್ಣೀರನ್ನು ನೋಡು, ಸುಮ್ಮನಿರಬೇಡ. ನನ್ನ ಪೂರ್ವಿಕರಂತೆಯೇ ನಾನು ನಿನ್ನ ಮರೆಹೊಕ್ಕಿರುವ ಪ್ರವಾಸಿಯೂ, ಪರದೇಶದವನೂ ಆಗಿದ್ದೇನಲ್ಲಾ.

13ನಾನು ಅಗಲಿ ಹೋಗಿ ಇಲ್ಲವಾಗುವುದಕ್ಕೆ ಮೊದಲು, ಸ್ವಲ್ಪ ಸಂತೋಷಪಡುವಂತೆ ನಿನ್ನ ಕೋಪದೃಷ್ಟಿಯನ್ನು ನನ್ನ ಕಡೆಯಿಂದ ತಿರುಗಿಸಿಕೊಳ್ಳಬೇಕು, ದೇವಾ.”

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath