ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 42

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.

2ನನ್ನ ಮನಸ್ಸು ದೇವರಿಗಾಗಿ, ಚೈತನ್ಯಸ್ವರೂಪನಾದ ದೇವರಿಗಾಗಿ ಹಾರೈಸುತ್ತದೆ; ನಾನು ಯಾವಾಗ ಹೋಗಿ ದೇವರ ಸನ್ನಿಧಿಯಲ್ಲಿ ಸೇರುವೆನೋ?

3“ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.

4ನಾನು ಭಜನೋತ್ಸವದಲ್ಲಿ ಸೇರಿ, ಜನಸಮೂಹದೊಡನೆ ಹರ್ಷಧ್ವನಿಮಾಡುತ್ತಾ, ಸ್ತೋತ್ರಪದಗಳನ್ನು ಹಾಡುತ್ತಾ, ದೇವಾಲಯಕ್ಕೆ ಹೋಗುತ್ತಿದ್ದದ್ದನ್ನೇ ನೆನಪಿಗೆ ತಂದುಕೊಂಡು, ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.

5ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ ದೇವರೂ ಆಗಿದ್ದಾನೆ. ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

6ನನ್ನ ದೇವರೇ, ನನ್ನ ಪ್ರಾಣವು ಕುಗ್ಗಿಹೋಗಿದೆ; ಆದುದರಿಂದ ಯೊರ್ದನ್ ಹೊಳೆಯ ದೇಶ, ಹೆರ್ಮೋನ್ ಪರ್ವತ, ಮಿಸಾರ್ ಬೆಟ್ಟ ಇವುಗಳಲ್ಲಿರುವವನಾಗಿ ನಿನ್ನನ್ನು ಸ್ಮರಿಸುತ್ತೇನೆ.

7ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.

8ಯೆಹೋವನು ಹಗಲಿನಲ್ಲಿ ತನ್ನ ಪ್ರೀತಿಯನ್ನು ನನಗೆ ಅನುಗ್ರಹಿಸುವನು; ರಾತ್ರಿ ವೇಳೆಯಲ್ಲಿಯೂ ಆತನ ಕೀರ್ತನೆ ನನ್ನಲ್ಲಿರುವುದು. ನನ್ನ ಜೀವಾಧಾರಕನಾದ ದೇವರನ್ನು ಪ್ರಾರ್ಥಿಸುವೆನು.

9ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು.

10ನನ್ನ ವಿರೋಧಿಗಳು, “ನಿನ್ನ ದೇವರು ಎಲ್ಲಿ?” ಎಂದು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ ನನ್ನ ಎಲುಬುಗಳೆಲ್ಲಾ ಮುರಿದ ಹಾಗಿವೆ.

11ನನ್ನ ಮನವೇ, ನೀನು ಕುಗ್ಗಿ ಹೋಗಿರುವುದೇನು? ಹೀಗೆ ವ್ಯಥೆಪಡುವುದೇಕೆ? ದೇವರನ್ನು ನಿರೀಕ್ಷಿಸು; ಆತನೇ ನನಗೆ ರಕ್ಷಕನೂ, ದೇವರೂ ಆಗಿದ್ದಾನೆ; ನಾನು ಇನ್ನೂ ಆತನನ್ನು ಸ್ತುತಿಸುತ್ತಿರುವೆನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath