ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 46

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

2ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.

3ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ

4ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.

5ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.

6ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.

7ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ

8ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.

9ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.

10“ ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.

11ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath