ಕೀರ್ತನೆಗಳು 47
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.
2ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.
3ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.
4ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ
5ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.
6ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ.
7ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ.
8ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ.
9ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath