ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 48

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.

2ರಾಜಾಧಿರಾಜನ ಪಟ್ಟಣವಿರುವ ಚೀಯೋನ್ ಪರ್ವತವು ಉತ್ತರದಿಕ್ಕಿನಲ್ಲಿ ಉನ್ನತವಾಗಿಯೂ, ರಮ್ಯವಾಗಿಯೂ, ಭೂಲೋಕದಲ್ಲೆಲ್ಲಾ ಕಂಗೊಳಿಸುತ್ತಿರುವುದು.

3ದೇವರು ಅದರ ಕೊತ್ತಲುಗಳಲ್ಲಿ, ತಾನೇ ಭದ್ರವಾದ ಬುರುಜೆಂದು ಕೀರ್ತಿಪಡೆದನು.

4ರಾಜರು ಕೂಡಿಕೊಂಡರು; ಅವರು ಒಗ್ಗಟ್ಟಾಗಿ ಬಂದರು.

5ನೋಡಿ ಬೆರಗಾದರು; ತಲ್ಲಣಿಸಿ ಓಡಿಹೋದರು.

6ಕಂಪನವೂ ಹೆರುವವಳಂತೆ, ವೇದನೆಯೂ ಅವರಿಗೆ ಉಂಟಾಯಿತು.

7ದೇವರೇ, ನೀನು ಬಿರುಗಾಳಿಯಿಂದ ತಾರ್ಷಿಷ್ ದೇಶದ ದೊಡ್ಡ ದೊಡ್ಡ ಹಡಗುಗಳನ್ನು ಒಡೆದುಬಿಟ್ಟಂತಾಯಿತು.

8ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ. ದೇವರು ಅದನ್ನು ಶಾಶ್ವತವಾಗಿ ಸ್ಥಾಪಿಸುವನು. ಸೆಲಾ

9ದೇವರೇ, ನಾವು ನಿನ್ನ ಆಲಯದಲ್ಲಿ, ನಿನ್ನ ಪ್ರೀತಿಯನ್ನು ಸ್ಮರಿಸುತ್ತೇವೆ;

10ದೇವರೇ, ನಿನ್ನ ನಾಮದ ಘನತೆಗೆ ತಕ್ಕಂತೆಯೇ, ಲೋಕವೆಲ್ಲಾ ನಿನ್ನನ್ನು ಹೊಗಳುವುದು. ನಿನ್ನ ಬಲಗೈ ನೀತಿಯನ್ನು ನೆರವೇರಿಸಿತು.

11ಚೀಯೋನ್ ಪಟ್ಟಣದವರು ಹರ್ಷಿಸಲಿ; ನೀನು ನ್ಯಾಯವನ್ನು ನಿರ್ಣಯಿಸಿದ್ದರಿಂದ, ಯೆಹೂದ ಸೀಮೆಯ ನಿವಾಸಿಗಳು ಆನಂದಪಡಲಿ.

12ಚೀಯೋನ್ ಸಂಸ್ಥಾನದ ಸುತ್ತಲೂ ಸಂಚರಿಸಿ, ಅದರ ಬುರುಜುಗಳನ್ನು ಲೆಕ್ಕಿಸಿರಿ.

13ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.

14ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ, ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡೆಸುವವನಾಗಿದ್ದಾನೆ ಎಂದು ತಿಳಿಸುವಿರಿ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath