ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 49

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.

2ಜನರೇ, ಜನಾಧಿಪತಿಗಳೇ, ಬಡವರೇ ಮತ್ತು ಐಶ್ವರ್ಯವಂತರೇ, ನೀವೆಲ್ಲರೂ ಒಂದಾಗಿ ಬಂದು ಆಲಿಸಿರಿ.

3ನನ್ನ ಬಾಯಿ ಸುಜ್ಞಾನವನ್ನು ಬೋಧಿಸುವುದು; ನನ್ನ ಹೃದಯದ ಧ್ಯಾನವು ವಿವೇಕದಿಂದ ಕೂಡಿದೆ.

4ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.

5ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?

6ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.

7ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.

8ಅವನ ಪ್ರಾಣವು ಶಾಶ್ವತವಾಗಿ ಉಳಿಯಲು, ಅಪಾರ ಹಣವನ್ನು ಕೊಟ್ಟು ಬಿಡಿಸಲಾರನು.

9ಮರಣವನ್ನು ತಪ್ಪಿಸಿಕೊಳ್ಳುವುದಕ್ಕೆ ಎಷ್ಟು ಹಣ ಕೊಟ್ಟರೂ, ಸಾಲುವುದೇ ಇಲ್ಲ, ಅಂಥ ಪ್ರಯತ್ನ ನಿಷ್ಫಲವೆಂದು ತಿಳಿಯಬೇಕು.

10ಸುಜ್ಞಾನಿಗಳು ಸಾಯುವುದನ್ನು ನೋಡುತ್ತೇವಲ್ಲಾ; ಹಾಗೆಯೇ ಪಶುಗಳಂತಿರುವ ಜ್ಞಾನಹೀನರೂ ನಾಶವಾಗುತ್ತಾರೆ. ಅವರು ನಂಬಿದ್ದ ಆಸ್ತಿಯು ಇತರರ ಪಾಲಾಗುತ್ತದೆ.

11ಅವರ ಸಮಾಧಿಯೇ ಶಾಶ್ವತಮಂದಿರವು; ತಮ್ಮ ನಿವಾಸಗಳು ತಲತಲಾಂತರಕ್ಕೂ ಇರುವುದೆಂದು ಯೋಚಿಸಿ, ಭೂಮಿಗಳಿಗೆ ತಮ್ಮ ಹೆಸರುಗಳನ್ನು ಕೊಟ್ಟಿದ್ದಾರೆ.

12ಆದರೂ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ ಸ್ಥಿರವಲ್ಲ; ನಾಶವಾಗುವ ಪಶುಗಳಂತೆಯೇ ಇಲ್ಲವಾಗುತ್ತಾನೆ.

13ಮೂರ್ಖರಿಗೂ ಅವರ ಮಾತಿನಂತೆ ನಡೆಯುವವರಿಗೂ ಇದೇ ಗತಿ. ಸೆಲಾ

14ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.

15ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. ಸೆಲಾ

16ಒಬ್ಬನ ಐಶ್ವರ್ಯವೂ, ಗೃಹವೈಭವವೂ ವೃದ್ಧಿಯಾದಾಗ ಕಳವಳಪಡಬೇಡ.

17ಅವನು ಸಾಯುವಾಗ ಏನೂ ತೆಗೆದುಕೊಂಡು ಹೋಗುವುದಿಲ್ಲ; ಅವನ ವೈಭವವು ಅವನೊಡನೆ ಹೋಗುವುದಿಲ್ಲ.

18ಸಿರಿ ಬಂದಾಗ ನೆರೆಯವರ ಹೊಗಳಿಕೆ ತಪ್ಪದು ಎಂಬಂತೆ, ಅವನು ಜೀವಮಾನದಲ್ಲಿ ಆತ್ಮಸ್ತುತಿಯಿಂದಲೂ, ಜನರಸ್ತುತಿಯಿಂದಲೂ ಕೂಡಿದವನಾದರೂ,

19ಪೂರ್ವಿಕರ ಬಳಿಗೆ ಸೇರಿ ಅವರಂತೆಯೇ, ಎಂದಿಗೂ ಬೆಳಕನ್ನು ನೋಡುವುದಿಲ್ಲ.

20ವಿವೇಕಹೀನ ಮನುಷ್ಯನು ಎಷ್ಟು ಘನವಾದ ಪದವಿಯಲ್ಲಿದ್ದರೂ, ನಶಿಸಿ ಹೋಗುವ ಪಶುಗಳಿಗೆ ಸಮಾನವಾಗಿ ಇಲ್ಲವಾಗುತ್ತಾನೆ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath