ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 50

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.

2ಅತ್ಯಂತ ರಮಣೀಯವಾದ ಚೀಯೋನಿನಲ್ಲಿರುವ, ದೇವರು ಪ್ರಕಾಶಿಸುತ್ತಾನೆ.

3ನಮ್ಮ ದೇವರು ಪ್ರತ್ಯಕ್ಷನಾಗುವನು, ಎಷ್ಟು ಮಾತ್ರವೂ ಸುಮ್ಮನಿರುವುದಿಲ್ಲ; ಆತನ ಮುಂಭಾಗದಲ್ಲಿ ಬೆಂಕಿ ಪ್ರಜ್ವಲಿಸುತ್ತದೆ; ಆತನ ಸುತ್ತಲು ಬಿರುಗಾಳಿ ಬೀಸುತ್ತದೆ.

4ಆತನು ತನ್ನ ಪ್ರಜೆಗಳ ನ್ಯಾಯವಿಚಾರಣೆಯಲ್ಲಿ ಭೂಮ್ಯಾಕಾಶಗಳನ್ನು ಸಾಕ್ಷಿಗಳನ್ನಾಗಿ ನೇಮಿಸುತ್ತಾನೆ.

5“ನನ್ನೊಡನೆ ಯಜ್ಞದ ಮೂಲಕ ಒಡಂಬಡಿಕೆಯನ್ನು ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸುತ್ತಾನೆ.

6ದೇವರು ತಾನೇ ನ್ಯಾಯಾಧಿಪತಿ; ಆತನು ನೀತಿಸ್ವರೂಪನೆಂದು ಆಕಾಶಮಂಡಲವು ಘೋಷಿಸುತ್ತದೆ. ಸೆಲಾ

7ಆತನು ಆಜ್ಞಾಪಿಸುವುದು ಏನೆಂದರೆ, “ಪ್ರಜೆಗಳಿರಾ, ಇಸ್ರಾಯೇಲ್ಯರೇ, ದೇವರಾದ ನಾನೇ ನಿಮ್ಮ ದೇವರು; ನಿಮಗೆ ಖಂಡಿತವಾಗಿ ಹೇಳುತ್ತೇನೆ” ಕೇಳಿರಿ.

8ನಾನು ನಿಮ್ಮ ಯಜ್ಞದ ವಿಷಯದಲ್ಲಿ ತಪ್ಪೆಣಿಸುವುದಿಲ್ಲ; ಸರ್ವಾಂಗಹೋಮಗಳನ್ನು ನೀವು ನಿತ್ಯವೂ ನನಗೆ ಸಮರ್ಪಿಸುತ್ತೀರಲ್ಲಾ.

9ಆದರೂ ನಿಮ್ಮ ಮನೆಗಳಿಂದ ನನಗೆ ಹೋರಿ ಬೇಕಾಗಿಲ್ಲ; ನಿಮ್ಮ ದೊಡ್ಡಿಗಳಿಂದ ಹೋತ ಬೇಕಿಲ್ಲ.

10ಕಾಡಿನಲ್ಲಿರುವ ಸರ್ವಮೃಗಗಳೂ, ಗುಡ್ಡಗಳಲ್ಲಿರುವ ಸಾವಿರಾರು ಪಶುಗಳೂ ನನ್ನವೇ.

11ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆ; ಅಡವಿಯ ಜೀವಜಂತುಗಳೆಲ್ಲಾ ನನಗೆ ಗೊತ್ತುಂಟು.

12ನನಗೆ ಹಸಿವೆಯಿದ್ದರೆ ನಿಮಗೆ ತಿಳಿಸುವುದಿಲ್ಲ; ಏಕೆಂದರೆ ಲೋಕವೂ ಅದರಲ್ಲಿರುವುದೆಲ್ಲವೂ ನನ್ನದಲ್ಲವೇ.

13ನಾನು ಹೋರಿಗಳ ಮಾಂಸವನ್ನು ತಿನ್ನುವುದೂ, ಹೋತಗಳ ರಕ್ತವನ್ನು ಕುಡಿಯುವುದೂ ಉಂಟೇ?

14ಸ್ತುತಿಯಜ್ಞವನ್ನೇ ದೇವರಿಗೆ ಸಮರ್ಪಿಸಿರಿ; ವಾಗ್ದಾನ ಮಾಡಿದ ಹರಕೆಗಳನ್ನು ಪರಾತ್ಪರನಾದ ದೇವರಿಗೆ ಸಲ್ಲಿಸಿರಿ.

15ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.

16ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?

17ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.

18ನೀವು ಕಳ್ಳರೊಡನೆ ಸೇರಿ ಅವರಿಗೆ ಸಮ್ಮತಿ ನೀಡುತ್ತೀರಿ; ಜಾರರ ಒಡನಾಟದಲ್ಲಿ ನೀವು ಸಂತೋಷದಿಂದ ಇರುತ್ತೀರಿ.

19ನಿಮ್ಮ ಬಾಯಿಯನ್ನು ಕೇಡಿಗೆ ಒಪ್ಪಿಸುತ್ತೀರಿ; ನಾಲಿಗೆಯು ಮೋಸವನ್ನು ನೇಯುತ್ತದೆ.

20ನೀವು ಕುಳಿತುಕೊಂಡು ನಿಮ್ಮ ಸಹೋದರರ ವಿರುದ್ಧವಾಗಿ ಮಾತನಾಡುತ್ತೀರಿ; ನಿಮ್ಮ ಒಡಹುಟ್ಟಿದವರನ್ನು ದೂರುತ್ತೀರಿ.

21ನೀವು ಹೀಗೆ ಮಾಡಿದರೂ ನಾನು ಮೌನವಾಗಿದ್ದೆನು. ಆದುದರಿಂದ, ‘ದೇವರೂ ನಮ್ಮಂಥವನೇ’ ಎಂದು ತಿಳಿದುಕೊಂಡಿರಿ. ಈಗಲಾದರೋ ನಾನು ಎಲ್ಲವನ್ನು, ನಿಮ್ಮ ಮುಂದೆ ವಿವರಿಸಿ ನಿಮ್ಮನ್ನು ಅಪರಾಧಿಗಳೆಂದು ಸ್ಥಾಪಿಸುವೆನು.

22ದೇವರನ್ನು ಬಿಟ್ಟವರೇ, ಇದನ್ನು ಮನದಟ್ಟು ಮಾಡಿಕೊಳ್ಳಿರಿ; ಇಲ್ಲವಾದರೆ ನಿಮ್ಮನ್ನು ಹರಿದುಬಿಟ್ಟೇನು. ನಿಮ್ಮನ್ನು ತಪ್ಪಿಸುವವರು ಯಾರೂ ಇರುವುದಿಲ್ಲ.

23ಯಾರು ಸ್ತುತಿಯಜ್ಞವನ್ನು ಸಮರ್ಪಿಸುತ್ತಾರೋ ಅವರೇ ನನ್ನನ್ನು ಗೌರವಿಸುವವರು; ತಮ್ಮ ನಡತೆಯನ್ನು ಸರಿಪಡಿಸಿಕೊಳ್ಳುವವರಿಗೆ ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.”

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath