ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 53

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

2ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ದೇವರು ಆಕಾಶದಿಂದ ಮನುಷ್ಯರನ್ನು ನೋಡಲಾಗಿ,

3ಒಳ್ಳೆಯದನ್ನು ನಡೆಸುವವರು ಒಬ್ಬರೂ ಇಲ್ಲ; ಅವರೆಲ್ಲರೂ ದ್ರೋಹಿಗಳಾಗಿ ಕೆಟ್ಟುಹೋದವರೇ.

4ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ.

5ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.

6ಚೀಯೋನಿನಿಂದ ಇಸ್ರಾಯೇಲ್ಯರಿಗೆ ರಕ್ಷಣೆಯು ಬೇಗನೆ ಬರಲಿ. ದೇವರು ತನ್ನ ಭಾಗ್ಯವನ್ನು ಜನರಿಗೆ ಹಿಂದಿರುಗಿಸುವಾಗ, ಆತನ ಪ್ರಜೆಗಳಾಗಿರುವ ಯಾಕೋಬ ವಂಶದವರು ಉಲ್ಲಾಸಗೊಳ್ಳುವರು; ಇಸ್ರಾಯೇಲರು ಹರ್ಷಿಸುವರು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath