ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 56

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರೇ, ಕರುಣಿಸು; ನರರು ನನ್ನನ್ನು ತುಳಿದುಬಿಡಬೇಕೆಂದು ಎದ್ದಿದ್ದಾರೆ. ನನ್ನ ಎದುರಾಳಿಗಳು ಹಗಲೆಲ್ಲಾ ಯುದ್ಧಕ್ಕೆ ನಿಂತು ಬಾಧಿಸುತ್ತಾರೆ.

2ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.

3ನನಗೆ ಹೆದರಿಕೆಯುಂಟಾದಾಗ ನಿನ್ನನ್ನೇ ಆಶ್ರಯಿಸಿಕೊಳ್ಳುವೆನು.

4ದೇವರ ವಾಗ್ದಾನಕ್ಕೋಸ್ಕರ ಆತನಲ್ಲಿಯೇ ಹೆಚ್ಚಳಪಡುವೆನು; ದೇವರನ್ನು ನಂಬಿ ನಿರ್ಭಯದಿಂದಿರುವೆನು. ನರಪ್ರಾಣಿಗಳು ನನಗೆ ಏನು ಮಾಡಾರು?

5ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ.

6ಅವರು ಒಟ್ಟುಗೂಡಿ ನನ್ನ ಜೀವ ತೆಗೆಯಬೇಕೆಂದು ಹೊಂಚುಹಾಕಿ, ನನ್ನ ಹೆಜ್ಜೆಜಾಡು ಹಿಡಿದು ಬರುತ್ತಾರೆ.

7ಇಂಥ ಅನ್ಯಾಯಗಾರರು ತಪ್ಪಿಸಿಕೊಳ್ಳಬಹುದೋ? ದೇವರೇ, ರೌದ್ರದಿಂದ ಆ ಜನಾಂಗಗಳನ್ನು ಉರುಳಿಸಿಬಿಡು.

8ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆಯಲ್ಲಾ; ಅದರ ವಿಷಯವಾಗಿ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.

9ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಹಿಂದಿರುಗಿ ಓಡುವರು; ದೇವರು ನನ್ನ ಸಂಗಡ ಇರುವುದು ನಿಶ್ಚಯ.

10ದೇವರ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ. ಯೆಹೋವನ ವಾಗ್ದಾನಗಳಲ್ಲಿ ಹಾಡಿ ಹರಸುತ್ತೇನೆ.

11ದೇವರನ್ನು ನಂಬಿ ನಿರ್ಭಯದಿಂದಿರುವೆನು; ನರಪ್ರಾಣಿಗಳು ನನಗೆ ಏನು ಮಾಡಾರು?

12ದೇವರೇ, ನಿನಗೆ ಹೊತ್ತ ಹರಕೆಗಳನ್ನು ನಾನು ಸಲ್ಲಿಸುವೆನು; ಕೃತಜ್ಞತಾ ಯಜ್ಞಗಳನ್ನು ನಿನಗೆ ಸಮರ್ಪಿಸುವೆನು.

13ಏಕೆಂದರೆ, ನಾನು ಜೀವದಿಂದ ಬೆಳಕಿನಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ, ನನ್ನ ಪಾದಗಳನ್ನು ಎಡವಿಬೀಳದಂತೆ ಕಾಪಾಡಿದ್ದಿ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath