ಕೀರ್ತನೆಗಳು 57
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.
2ಪರಾತ್ಪರನಾದ ದೇವರಿಗೆ ಮೊರೆಯಿಡುವೆನು, ನನ್ನ ಕಾರ್ಯವನ್ನು ಸಫಲಮಾಡುವ ದೇವರನ್ನು ಕೂಗಿ ಕರೆಯುವೆನು.
3ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.
4ನಾನು ಸಿಂಹಗಳಂತಿರುವ ಶತ್ರುಗಳ ಮಧ್ಯದಲ್ಲಿ ಸಿಕ್ಕಿದ್ದೇನೆ; ದುರಾಶೆಯಿಂದ ಕಬಳಿಸುವಂತಹ ಮನುಷ್ಯರ ನಡುವೆ ಬಿದ್ದಿದ್ದೇನೆ. ಅವರ ಹಲ್ಲುಗಳು ಈಟಿ ಮತ್ತು ಬಾಣಗಳಂತಿವೆ, ನಾಲಿಗೆಗಳು ಹದವಾದ ಕತ್ತಿಗಳೇ.
5ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
6ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ
7ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.
8ನನ್ನ ಮನವೇ, ಚುರುಕಾಗು; ಸ್ವರಮಂಡಲವೇ, ಕಿನ್ನರಿಯೇ, ಎಚ್ಚರವಾಗಿರಿ. ಸಂಕೀರ್ತನೆಯಿಂದ ಉದಯವನ್ನು ಎದುರುಗೊಳ್ಳುವೆನು.
9ಕರ್ತನೇ, ಜನಾಂಗಗಳಲ್ಲಿ ನಿನ್ನನ್ನು ಸ್ತುತಿಸುವೆನು; ಸರ್ವದೇಶದವರೊಳಗೆ ನಿನ್ನನ್ನು ಕೊಂಡಾಡುವೆನು.
10ಏಕೆಂದರೆ ನಿನ್ನ ಕೃಪೆಯು ಆಕಾಶವನ್ನೂ, ನಿನ್ನ ಸತ್ಯತೆಯು ಮುಗಿಲನ್ನೂ ಮುಟ್ಟುವಷ್ಟು ದೊಡ್ಡವಾಗಿವೆ.
11ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath