ಕೀರ್ತನೆಗಳು 58
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಅಧಿಕಾರಿಗಳೇ , ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?
2ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.
3ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
4ಅವರು ಸರ್ಪದಂತೆ ವಿಷಭರಿತರು.
5ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
6ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
7ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.
8ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.
9ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.
10ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.
11ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath