ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 59

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನನ್ನ ದೇವರೇ, ಶತ್ರುಗಳ ಕೈಯಿಂದ ನನ್ನನ್ನು ಬಿಡಿಸು; ನನಗೆ ವಿರುದ್ಧವಾಗಿ ಎದ್ದಿರುವವರಿಗೆ ನನ್ನನ್ನು ತಪ್ಪಿಸಿ ಭದ್ರಸ್ಥಳದಲ್ಲಿರಿಸು.

2ಕೆಡುಕರಿಂದ ಬಿಡಿಸು; ಕೊಲೆಪಾತಕರಿಂದ ನನ್ನನ್ನು ರಕ್ಷಿಸು.

3ಇಗೋ, ಅವರು ನನ್ನ ಜೀವಕ್ಕೆ ಹೊಂಚುಹಾಕುತ್ತಾರೆ; ಬಲಿಷ್ಠರು ನನಗೆ ವಿರುದ್ಧವಾಗಿ ಗುಂಪುಕೂಡಿದ್ದಾರೆ. ಯೆಹೋವನೇ, ನಾನು ನಿರ್ದೋಷಿಯೂ ನಿರಪರಾಧಿಯೂ ಅಲ್ಲವೇ!

4ನಿಷ್ಕಾರಣವಾಗಿ ನನ್ನ ಮೇಲೆ ಬೀಳಲು ಮುತ್ತಿಗೆ ಹಾಕಿ ನಿಂತಿದ್ದಾರೆ; ಎದ್ದು ಬಂದು ಪರಾಂಬರಿಸಿ ನನಗೆ ಸಹಾಯಮಾಡು.

5ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರ ದೇವರೇ, ನೀನು ಎಚ್ಚರವಾಗಿ ಎಲ್ಲಾ ಅನ್ಯಜನಾಂಗಗಳನ್ನು ದಂಡಿಸು. ದುಷ್ಟದ್ರೋಹಿಗಳಲ್ಲಿ ಒಬ್ಬನಿಗೂ ದಯತೋರಿಸಬೇಡ. ಸೆಲಾ

6ಅವರು ಪ್ರತಿಸಾಯಂಕಾಲವೂ ಬಂದು ಬಂದು ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಿದ್ದಾರೆ.

7ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.

8ಯೆಹೋವನೇ, ನೀನಾದರೋ ಅವರನ್ನು ನೋಡಿ ನಗುವಿ; ಎಲ್ಲಾ ಅನ್ಯಜನಾಂಗಗಳನ್ನು ಪರಿಹಾಸ್ಯಮಾಡುವಿ.

9ನನ್ನ ಬಲವೇ, ನಿನ್ನನ್ನು ನಿರೀಕ್ಷಿಸುತ್ತಿದ್ದೇನೆ. ನನ್ನ ಆಶ್ರಯದುರ್ಗವು ದೇವರೇ.

10ನನ್ನ ದೇವರು ತನ್ನ ಮಹಾ ಪ್ರೀತಿಯಿಂದ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.

11ಕರ್ತನೇ, ನಮ್ಮ ಗುರಾಣಿಯೇ, ಅವರನ್ನು ಫಕ್ಕನೆ ಸಂಹರಿಸಬೇಡ. ನನ್ನ ಜನರು ಮರೆತುಬಿಡದ ಹಾಗೆ ಅವರು ಉಳಿಯಲಿ. ನಿನ್ನ ಸೇನಾಬಲದಿಂದ ಚದುರಿಸಿ, ಭ್ರಾಂತಿಯಿಂದ ಅಲೆದಾಡಿಸಿ ಅವರನ್ನು ಕೆಡವಿಬಿಡು.

12ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.

13ಅವರು ನುಡಿಯುವ ಶಾಪಕ್ಕಾಗಿಯೂ ಸುಳ್ಳಿಗಾಗಿಯೂ, ಅವರನ್ನು ರೌದ್ರದಿಂದ ಸಂಹರಿಸಿ ನಿರ್ನಾಮಗೊಳಿಸು. ಯಾಕೋಬನ ವಂಶದವರನ್ನು ಆಳುವವನು ದೇವರೇ ಎಂಬುದು, ಭೂಲೋಕದಲ್ಲೆಲ್ಲಾ ಗೊತ್ತಾಗಲಿ. ಸೆಲಾ

14ಅವರು ಪ್ರತಿಸಾಯಂಕಾಲವೂ ಬಂದು ಬಂದು, ನಾಯಿಗಳಂತೆ ಗುರುಗುಟ್ಟುತ್ತಾ ಪಟ್ಟಣವನ್ನೆಲ್ಲಾ ಸುತ್ತುತ್ತಾ ಇದ್ದಾರೆ.

15ಆಹಾರಕ್ಕಾಗಿ ಅತ್ತಿತ್ತ ತಿರುಗುತ್ತಾರೆ; ಹೊಟ್ಟೆಗಿಲ್ಲದಿದ್ದರೆ ಗುಣುಗುಟ್ಟುತ್ತಾರೆ .

16ನಾನಾದರೋ, ಇಕ್ಕಟ್ಟಿನ ಕಾಲದಲ್ಲಿ ಆಶ್ರಯವೂ ದುರ್ಗವೂ ಆಗಿರುವ ನಿನ್ನ ಬಲವನ್ನು ಹಾಡಿ ಹೊಗಳುವೆನು; ಪ್ರಾತಃಕಾಲದಲ್ಲಿ ನಿನ್ನ ಪ್ರೇಮವನ್ನು ಉಲ್ಲಾಸದಿಂದ ಕೊಂಡಾಡುವೆನು.

17ನನ್ನ ಬಲವೇ, ನಿನ್ನನ್ನು ಹಾಡಿಹರಸುವೆನು, ನನ್ನ ಆಶ್ರಯದುರ್ಗವೂ ಕೃಪಾನಿಧಿಯೂ ದೇವರೇ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath