ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 5

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನೇ ನನ್ನ ಮೊರೆಗೆ ಕಿವಿಗೊಡು; ನನ್ನ ನರಳಾಟವನ್ನು ಲಕ್ಷ್ಯಕ್ಕೆ ತಂದುಕೋ.

2ನನ್ನ ಅರಸನೇ, ನನ್ನ ದೇವರೇ, ನಿನ್ನನ್ನೇ ಪ್ರಾರ್ಥಿಸುವೆನು; ನನ್ನ ಮೊರೆಯನ್ನು ಆಲಿಸು.

3ಯೆಹೋವನೇ, ಉದಯಕಾಲದಲ್ಲಿ ನನ್ನ ಸ್ವರವು ನಿನಗೆ ಕೇಳಿಸುವುದು; ಉದಯಕಾಲದಲ್ಲಿಯೇ ನನ್ನ ಪ್ರಾರ್ಥನೆಯನ್ನು ನಿನಗೆ ಸಮರ್ಪಿಸಿ, ನಿನ್ನಿಂದ ಸದುತ್ತರವನ್ನು ಎದುರುನೋಡುತ್ತಿರುವೆನು.

4ನೀನು ದುಷ್ಟತ್ವದಲ್ಲಿ ಸಂತೋಷಿಸುವ ದೇವರಲ್ಲ; ಕೆಟ್ಟದ್ದು ನಿನ್ನ ಬಳಿಯಲ್ಲಿ ತಂಗಲಾರದು.

5ಸೊಕ್ಕಿನವರು ನಿನ್ನ ಸನ್ನಿಧಿಯಲ್ಲಿ ನಿಲ್ಲಲಾರರು; ಅಧರ್ಮಿಗಳೆಲ್ಲರನ್ನು ನೀನು ಹಗೆಮಾಡುವಿ.

6ಸುಳ್ಳು ಹೇಳುವವರನ್ನು ನಾಶಮಾಡುವಿ; ಯೆಹೋವನೇ, ನರಹತ್ಯ ಮಾಡುವವರು ಮತ್ತು ಕಪಟಿಗಳು ನಿನಗೆ ಅಸಹ್ಯರಾಗಿದ್ದಾರೆ.

7ನಾನಂತು ನಿನ್ನ ಮಹಾಕೃಪೆಯನ್ನು ಹೊಂದಿದವನಾಗಿ ನಿನ್ನ ಮಂದಿರದೊಳಕ್ಕೆ ಪ್ರವೇಶಿಸುವೆನು; ನಿನ್ನಲ್ಲಿಯೇ ಭಯಭಕ್ತಿಯುಳ್ಳವನಾಗಿ, ನಿನ್ನ ಪರಿಶುದ್ಧ ಆಲಯದ ಕಡೆಗೆ ಅಡ್ಡಬೀಳುವೆನು.

8ಯೆಹೋವನೇ, ವಿರೋಧಿಗಳು ನನಗೆ ಕೇಡನ್ನೇ ಹಾರೈಸುತ್ತಿರುವುದರಿಂದ ನಿನ್ನ ನೀತಿಗೆ ಸರಿಯಾಗಿ ನನ್ನನ್ನು ನಡೆಸು; ನನ್ನ ಮುಂದೆ ನಿನ್ನ ಮಾರ್ಗವನ್ನು ಸರಾಗಮಾಡು.

9ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.

10ದೇವರೇ, ಅವರು ನಿನಗೆ ವಿರುದ್ಧವಾಗಿ ತಿರುಗಿಬಿದ್ದವರು; ಆದುದರಿಂದ ಅವರನ್ನು ಅಪರಾಧಿಗಳೆಂದು ನಿರ್ಣಯಿಸು; ಅವರು ತಮ್ಮ ಕುಯುಕ್ತಿಯಿಂದಲೇ ಮೋಸ ಹೋಗಲಿ; ಅವರ ದ್ರೋಹವು ಅಪಾರವಾಗಿರುವುದರಿಂದ ಅವರನ್ನು ತಳ್ಳಿಬಿಡು.

11ನಿನ್ನನ್ನು ಮೊರೆಹೊಕ್ಕವರೆಲ್ಲರು ನಿನ್ನಲ್ಲಿ ಸಂತೋಷಪಡುವರು; ನೀನು ಕಾಪಾಡುವವನೆಂದು ಅವರು ಯಾವಾಗಲೂ ಆನಂದ ಧ್ವನಿಮಾಡುವರು. ನಿನ್ನ ನಾಮವನ್ನು ಪ್ರೀತಿಸುವವರು ನಿನ್ನಲ್ಲಿ ಉಲ್ಲಾಸಗೊಳ್ಳುವರು.

12ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath