ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 60

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರೇ, ನೀನು ನಮ್ಮನ್ನು ಕೋಪದಿಂದ ತಳ್ಳಿ ಕೆಡವಿಬಿಟ್ಟಿದ್ದೀ; ನಮ್ಮ ರಕ್ಷಣಾ ಸಾಧನವನ್ನು ಮುರಿದುಬಿಟ್ಟಿದ್ದೀ; ನಮ್ಮನ್ನು ಪುನಃ ಸ್ಥಿರವಾಗಿ ನಿಲ್ಲಿಸು.

2ನೀನು ದೇಶವನ್ನು ಕಂಪನಗೊಳಿಸಿ ಒಡೆದುಬಿಟ್ಟಿದ್ದೀ; ಅದು ನಡುಗುತ್ತಿರುವುದಲ್ಲಾ. ಅದರ ಒಡಕುಗಳನ್ನು ಸರಿಮಾಡು;

3ನಿನ್ನ ಜನರನ್ನು ಸಂಕಟಕ್ಕೆ ಗುರಿಪಡಿಸಿದ್ದೀ; ನೀನು ನಮಗೆ ರೋಷವೆಂಬ ಪಾತ್ರೆಯಿಂದ ಪಾನಮಾಡಿಸಿದಿ.

4ನೀನು ನಿನ್ನ ಭಕ್ತರಿಗೆ ಧ್ವಜವನ್ನು ಕೊಟ್ಟಿದ್ದು, ಆದ್ದರಿಂದ ಅವರು ಬಿಲ್ಲಿನಿಂದ ತಪ್ಪಿಸಿಕೊಳ್ಳಬಹುದು. ಸೆಲಾ

5ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.

6ದೇವರು ತನ್ನ ಪವಿತ್ರಸ್ಥಳದಲ್ಲಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳೆದುಕೊಡುವೆನು.

7ಗಿಲ್ಯಾದ್ ಸೀಮೆಯೂ ಮತ್ತು ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.

8ಮೋವಾಬ್ ಪ್ರದೇಶವು ನನ್ನ ಸ್ನಾನಪಾತ್ರೆಯು; ಎದೋಮ್ ಸೀಮೆ ನನ್ನ ಪಾದರಕ್ಷೆಗಳನ್ನು ಬಿಡುವ ಸ್ಥಳ. ಫಿಲಿಷ್ಟಿಯ ದೇಶವೇ ನಾನು ನಿನ್ನ ಮೇಲೆ ಜಯಹೊಂದಿ ನಿನ್ನ ವಿಷಯವಾಗಿ ಜಯಘೋಷ ಮಾಡುವೆನು.

9ಕೋಟೆಕೊತ್ತಲುಗಳುಳ್ಳ ನಗರಕ್ಕೆ ನನ್ನನ್ನು ಕರೆದುಕೊಂಡು ಹೋಗುವವರು ಯಾರು? ಎದೋಮ್ ಪ್ರಾಂತ್ಯದೊಳಗೆ ನನ್ನನ್ನು ಸೇರಿಸುವವರು ಯಾರು?

10ದೇವರೇ, ನೀನು ನಮ್ಮ ಸೈನ್ಯಗಳ ಸಂಗಡ ಬರಲಿಲ್ಲವಲ್ಲಾ! ದೇವರೇ, ನಮ್ಮನ್ನು ಕೈಬಿಟ್ಟಿರುವೆಯಾ?

11ನಮಗೆ ಕೈನೀಡಿ ಶತ್ರುಬಾಧೆಯಿಂದ ಪಾರುಮಾಡು; ಮನುಷ್ಯರ ಸಹಾಯವು ವ್ಯರ್ಥ.

12ದೇವರ ಸಹಾಯದಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath