ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 61

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರೇ, ನನ್ನ ಕೂಗನ್ನು ಕೇಳಿ ನನ್ನ ಪ್ರಾರ್ಥನೆಗೆ ಕಿವಿಗೊಡು.

2ನಾನು ಎದೆಗುಂದಿದವನಾಗಿ ಭೂಮಿಯ ಕಡೆಯ ಭಾಗದಿಂದ ನಿನಗೆ ಮೊರೆಯಿಡುತ್ತೇನೆ; ನಾನು ಹತ್ತಲಾರದ ಆಶ್ರಯಗಿರಿಯ ಮೇಲೆ ನನ್ನನ್ನು ಹತ್ತಿಸು.

3ನೀನು ನನಗೆ ಶರಣನೂ, ಶತ್ರುಗಳಿಂದ ತಪ್ಪಿಸುವ ಭದ್ರವಾದ ಬುರುಜು ಆಗಿದ್ದೀ.

4ನನಗೆ ನಿರಂತರವೂ ನಿನ್ನ ಗುಡಾರದಲ್ಲಿ ಬಿಡಾರವಾಗಲಿ; ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವಂತೆ ಅನುಗ್ರಹಿಸು. ಸೆಲಾ

5ದೇವರೇ, ನೀನು ನನ್ನ ಹರಕೆಗಳಿಗೆ ಲಕ್ಷ್ಯಕೊಟ್ಟಿದ್ದೀ; ನಿನ್ನಲ್ಲಿ ಭಯಭಕ್ತಿಯುಳ್ಳವರಿಗೆ ಸಿಕ್ಕತಕ್ಕ ಬಾಧ್ಯತೆಯನ್ನು ನನಗೂ ದಯಪಾಲಿಸಿದ್ದೀ.

6ಅರಸನು ದೀರ್ಘಕಾಲ ಬಾಳುವಂತೆ ಅನುಗ್ರಹಿಸು; ಅವನ ಆಯಸ್ಸು ತಲತಲಾಂತರಗಳವರೆಗೆ ವೃದ್ಧಿಯಾಗಲಿ.

7ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.

8ಹೀಗಾದರೆ ನಾನು ಪ್ರತಿದಿನವೂ ನನ್ನ ಹರಕೆಗಳನ್ನು ಸಲ್ಲಿಸುವವನಾಗಿ, ನಿನ್ನ ನಾಮವನ್ನು ಸದಾ ಸ್ಮರಿಸಿ ಕೀರ್ತಿಸುತ್ತಿರುವೆನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath