ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 62

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ.

2ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲಿದರೂ ಬೀಳೆನು.

3ನೀವೆಲ್ಲರೂ ಒಬ್ಬ ಪುರುಷನ ಮೇಲೆ ಬಿದ್ದು, ಅವನು ಬಾಗಿದ ಗೋಡೆಯ ಹಾಗೆ ಮತ್ತು ಕುಸಿದ ಪ್ರಾಕಾರವೋ ಎಂಬಂತೆ ಅವನನ್ನು ಹೊಡೆದು ಕೆಡವಬೇಕೆಂದಿರುವುದು ಇನ್ನೆಷ್ಟರವರೆಗೆ?

4ಅವನನ್ನು ಉನ್ನತಸ್ಥಾನದಿಂದ ದೊಬ್ಬುವುದೇ ಅವರ ಆಲೋಚನೆ. ಸುಳ್ಳಾಡುವುದು ಅವರಿಗೆ ಅತಿಸಂತೋಷ; ಬಾಯಿಂದ ಹರಸಿ ಮನಸ್ಸಿನಿಂದ ಶಪಿಸುತ್ತಾರೆ. ಸೆಲಾ

5ನನ್ನ ಮನವೇ, ದೇವರನ್ನೇ ನಂಬಿ ಶಾಂತವಾಗಿರು. ನನ್ನ ನಿರೀಕ್ಷೆಯು ನೆರವೇರುವುದು ಆತನಿಂದಲೇ.

6ಆತನೇ ನನಗೆ ಶರಣನೂ, ರಕ್ಷಕನೂ ಮತ್ತು ದುರ್ಗವೂ; ನಾನು ಕದಲುವುದಿಲ್ಲ.

7ನನ್ನ ರಕ್ಷಣೆಗೂ, ಮಾನಕ್ಕೂ ದೇವರೇ ಆಧಾರ; ನನಗೆ ಬಲವಾದ ದುರ್ಗವೂ, ಆಶ್ರಯವೂ ದೇವರಲ್ಲಿಯೇ.

8ಜನರೇ, ಯಾವಾಗಲೂ ಆತನನ್ನೇ ನಂಬಿ, ನಿಮ್ಮ ಹೃದಯವನ್ನು ಆತನ ಮುಂದೆ ತೆರೆಯಿರಿ; ದೇವರು ನಮ್ಮ ಆಶ್ರಯವು. ಸೆಲಾ

9ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.

10ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.

11ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ.

12ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath