ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 63

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರೇ, ನೀನೇ ನನ್ನ ದೇವರು; ನಾನು ನಿನ್ನ ದರ್ಶನವನ್ನು ಕುತೂಹಲದಿಂದ ಎದುರುನೋಡುತ್ತೇನೆ. ನನ್ನ ಆತ್ಮವೂ ನಿನಗಾಗಿ ಹಂಬಲಿಸುತ್ತದೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿಗಾಗಿಯೋ ಎಂಬಂತೆ, ನನ್ನ ಶರೀರವು ನಿನಗಾಗಿ ದಾಹಗೊಳ್ಳುತ್ತದೆ.

2ನಿನ್ನ ಮಂದಿರದಲ್ಲಿ ನಾನು ನಿನ್ನ ಮಹತ್ತನ್ನೂ, ಪ್ರಭಾವವನ್ನೂ ಕಂಡ ಪ್ರಕಾರ, ಈಗಲೂ ಕಾಣಬೇಕೆಂದು ಅಪೇಕ್ಷಿಸುತ್ತೇನೆ.

3ನಿನ್ನ ಪ್ರೇಮಾನುಭವವು ಜೀವಕ್ಕಿಂತಲೂ ಶ್ರೇಷ್ಠ; ನನ್ನ ಬಾಯಿ ನಿನ್ನನ್ನು ಕೀರ್ತಿಸುವುದು.

4ನನ್ನ ಜೀವಮಾನದಲ್ಲೆಲ್ಲಾ ಹೀಗೆಯೇ ನಿನ್ನನ್ನು ಹಾಡಿ ಹರಸುತ್ತಾ, ನಿನ್ನ ಹೆಸರೆತ್ತಿ ಕೈಮುಗಿಯುವೆನು.

5ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.

6ನಾನು ಹಾಸಿಗೆಯ ಮೇಲಿದ್ದುಕೊಂಡು ನಿನ್ನನ್ನು ಸ್ಮರಿಸುವಾಗ, ರಾತ್ರಿಯ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುತ್ತಿರುವೆನು.

7ನೀನು ನನಗೆ ಸಹಾಯಕನಾಗಿರುವೆಯಲ್ಲಾ; ನಿನ್ನ ರೆಕ್ಕೆಗಳ ಮರೆಯಲ್ಲಿ ಸುರಕ್ಷಿತನಾಗಿದ್ದುಕೊಂಡು, ಆನಂದಘೋಷ ಮಾಡುತ್ತಿರುವೆನು.

8ನನ್ನ ಆತ್ಮವು ನಿನ್ನನ್ನು ಅಂಟಿಕೊಂಡು ಹಿಂಬಾಲಿಸುವುದು; ನಿನ್ನ ಬಲಗೈ ನನಗೆ ಆಧಾರವಾಗಿರುವುದು.

9ನನ್ನ ಜೀವಕ್ಕೆ ಕೇಡು ಬಗೆಯುವವರೋ, ಅಧೋಲೋಕಕ್ಕೆ ಇಳಿದುಹೋಗುವರು.

10ಅವರು ಕತ್ತಿಗೆ ಬಲಿಯಾಗುವರು; ನರಿಗಳ ಪಾಲಾಗುವರು.

11ಆದರೆ ಅರಸನೋ ದೇವರಲ್ಲಿ ಆನಂದಿಸುವನು, ದೇವರ ಮೇಲೆ ಆಣೆಯಿಡುವವರೆಲ್ಲರು ಸುಳ್ಳುಬಾಯಿ ಮುಚ್ಚಿಹೋಗುವುದನ್ನು ಕಂಡು ಹಿಗ್ಗುವರು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath