ಕೀರ್ತನೆಗಳು 64
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ದೇವರೇ, ನನ್ನ ಸ್ವರವನ್ನು ಕೇಳಿ, ಶತ್ರುಭಯದಿಂದ ನನ್ನ ಜೀವವನ್ನು ರಕ್ಷಿಸು.
2ದುಷ್ಟರ ಒಳಸಂಚಿಗೂ, ಕೆಡುಕರ ಗುಪ್ತ ಆಲೋಚನೆಗೂ ಸಿಕ್ಕದಂತೆ, ನನ್ನನ್ನು ತಪ್ಪಿಸಿ ಭದ್ರಪಡಿಸು.
3ಅವರು ನಾಲಿಗೆಯೆಂಬ ಕತ್ತಿಯನ್ನು ಮಸೆದಿದ್ದಾರೆ; ವಿಷವಚನವೆಂಬ ಬಾಣವನ್ನು ಹೂಡಿದ್ದಾರೆ.
4ಗುಪ್ತಸ್ಥಳಗಳಲ್ಲಿದ್ದು ಸಜ್ಜನನಿಗೆ ಗುರಿಯಿಟ್ಟಿದ್ದಾರೆ. ಸ್ವಲ್ಪವೂ ಹೆದರದೆ ಅವನ ಮೇಲೆ ಫಕ್ಕನೆ ಎಸೆಯುತ್ತಾರೆ.
5ದುಷ್ಕೃತ್ಯಕ್ಕಾಗಿ ಮನಸ್ಸನ್ನು ದೃಢಪಡಿಸಿಕೊಂಡು ತಮ್ಮೊಳಗೆ, “ರಹಸ್ಯವಾಗಿ ಬಲೆಗಳನ್ನು ಒಡ್ಡೋಣ; ನಮ್ಮನ್ನು ನೋಡುವವರು ಯಾರು?” ಅಂದುಕೊಳ್ಳುತ್ತಾರೆ.
6ಅವರು, “ಕೇಡನ್ನು ಕಲ್ಪಿಸಿ, ಒಳ್ಳೆಯ ಉಪಾಯವನ್ನು ಕಂಡುಕೊಂಡಿದ್ದೇವೆ” ಅಂದುಕೊಳ್ಳುತ್ತಾರೆ; ಅವರ ಹೃದಯವೂ, ಅಂತರಂಗದ ಆಲೋಚನೆಯೂ ಅಶೋಧ್ಯವಾಗಿವೆ.
7ಆದರೆ ದೇವರು ಬಾಣವನ್ನು ಎಸೆಯಲು, ಫಕ್ಕನೆ ಅವರಿಗೆ ಗಾಯವಾಗುವುದು.
8ಅವರ ನಾಲಿಗೆಗಳೇ ಅವರಿಗೆ ವಿಘ್ನವಾಗಿ ಅವರು ಎಡವಿಬೀಳುವರು; ಆಗ ನೋಡುವವರೆಲ್ಲರು ತಲೆ ಅಲ್ಲಾಡಿಸಿ ಅಣಕಿಸುವರು.
9ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.
10ಸದ್ಭಕ್ತರು ಯೆಹೋವನಲ್ಲಿ ಆನಂದಪಟ್ಟು ಆತನನ್ನೇ ಆಶ್ರಯಿಸಿಕೊಳ್ಳುವರು; ಸರಳಹೃದಯದವರೆಲ್ಲರೂ ಹಿಗ್ಗುವರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath