ಕೀರ್ತನೆಗಳು 65
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ದೇವರೇ, ಚೀಯೋನಿನಲ್ಲಿ ನಿನಗೋಸ್ಕರ ಸ್ತೋತ್ರವು ಸಿದ್ಧವಾಗಿದೆ; ಹರಕೆಗಳು ನಿನಗೆ ಸಲ್ಲುತ್ತವೆ.
2ಪ್ರಾರ್ಥನೆಯನ್ನು ಕೇಳುವವನೇ, ನರರೆಲ್ಲರೂ ನಿನ್ನ ಬಳಿಗೆ ಬರುವರು.
3ನನ್ನ ಪಾಪಗಳನ್ನು ನಿವಾರಿಸಲು ನನ್ನಿಂದಾಗುವುದಿಲ್ಲ. ಆದರೆ ನಮ್ಮ ದೋಷಪರಿಹಾರಕನು ನೀನೇ.
4ನಿನ್ನ ಅಂಗಳದಲ್ಲಿ ವಾಸಿಸುವವರಾಗಿ, ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವುದಕ್ಕೋಸ್ಕರ, ನೀನು ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.
5ನಮ್ಮ ರಕ್ಷಕನಾದ ದೇವರೇ, ನೀನು ಭಯಂಕರ ಮಹತ್ಕಾರ್ಯಗಳನ್ನು ನಡೆಸಿ, ನಿನ್ನ ನೀತಿಗನುಸಾರವಾಗಿ ನಮಗೆ ಸದುತ್ತರವನ್ನು ದಯಪಾಲಿಸುವಿ. ಭೂಮಿಯ ಎಲ್ಲಾ ಕಡೆಯವರ, ಬಹುದೂರ ಸಮುದ್ರದ ಆಚೆಯ ಎಲ್ಲಾ ನಿವಾಸಿಗಳ ನಂಬಿಕೆಗೆ ಆಧಾರನು ನೀನೇ.
6ನೀನು ಶೌರ್ಯವೆಂಬ ನಡುಕಟ್ಟನ್ನು ಬಿಗಿದುಕೊಂಡು, ಬಲದಿಂದ ಪರ್ವತಗಳನ್ನು ಸ್ಥಿರವಾಗಿ ನಿಲ್ಲಿಸಿದವನು.
7ನೀನು ಸಮುದ್ರ ತರಂಗಗಳ ಘೋಷವನ್ನು ತಡೆಯುವವನೂ, ಜನಾಂಗಗಳ ಗೊಂದಲವನ್ನು ಶಾಂತಿಪಡಿಸುವವನೂ ಆಗಿದೀ.
8ಭೂಮಿಯ ಕಟ್ಟಕಡೆಗಳಲ್ಲಿ ವಾಸಿಸುವವರೂ, ನಿನ್ನ ಅದ್ಭುತಕೃತ್ಯಗಳಿಗಾಗಿ ಭಯಪಡುತ್ತಾರೆ; ಪೂರ್ವದಿಂದ ಪಶ್ಚಿಮದವರೆಗೆ ಇರುವವರನ್ನು ಹರ್ಷಗೊಳಿಸುವಿ.
9ನೀನು ನಮ್ಮ ದೇಶವನ್ನು ಕಟಾಕ್ಷಿಸಿ, ಅದರ ಮೇಲೆ ಮಳೆಸುರಿಸಿ, ಚೆನ್ನಾಗಿ ಹದಗೊಳಿಸುತ್ತೀ; ದೇವರೇ, ನಿನ್ನ ಕಾಲುವೆಗಳಲ್ಲಿ ನೀರಿಗೆ ಕೊರತೆ ಇಲ್ಲ. ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತಿ.
10ನೇಗಿಲಗೆರೆಗಳನ್ನು ತೇವಗೊಳಿಸಿ, ಮಳೆಯಿಂದ ಅದರ ಹೆಂಟೆಗಳನ್ನು ಕರಗಿಸಿ ಸಮಮಾಡುತ್ತಿ; ಅದರ ಬೆಳೆಯನ್ನು ವೃದ್ಧಿಪಡಿಸುತ್ತಿ.
11ನಿನ್ನ ಕೃಪೆಯಿಂದ ಸಂವತ್ಸರಕ್ಕೆ ಸುಭಿಕ್ಷ ಕಿರೀಟವನ್ನು ಇಟ್ಟಿದ್ದಿ; ನೀನು ಹಾದುಹೋಗುವ ಮಾರ್ಗದಲ್ಲೆಲ್ಲಾ ಸಮೃದ್ಧಿಕರವಾದ ವೃಷ್ಟಿಯು ಸುರಿಯುವುದು.
12ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.
13ಹುಲ್ಲುಗಾವಲುಗಳು ಕುರಿಹಿಂಡುಗಳೆಂಬ ವಸ್ತ್ರವನ್ನು ಹೊದ್ದುಕೊಂಡಿವೆ; ತಗ್ಗುಗಳು ಬೆಳೆಯಿಂದ ಶೋಭಿಸುತ್ತವೆ; ಅವು ಆನಂದಘೋಷಮಾಡಿ ಹಾಡುತ್ತವೋ ಎಂಬಂತಿವೆ.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath