ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 67

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ

2ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.

3ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.

4ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ

5ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.

6ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;

7ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath