ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 6

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

2ಯೆಹೋವನೇ, ಕನಿಕರಿಸು; ನಾನು ನಿಶ್ಶಕ್ತನಾಗಿ ಹೋಗಿದ್ದೇನೆ. ಯೆಹೋವನೇ, ವಾಸಿಮಾಡು; ನನ್ನ ಎಲುಬುಗಳೆಲ್ಲಾ ಅದುರುತ್ತವೆ.

3ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?

4ಯೆಹೋವನೇ, ಹಿಂತಿರುಗು, ನನ್ನನ್ನು ಬಿಡಿಸು; ನಿನ್ನ ಕೃಪೆಯ ನಿಮಿತ್ತ ನನ್ನನ್ನು ರಕ್ಷಿಸು.

5ಮೃತರಿಗೆ ನಿನ್ನ ಜ್ಞಾಪಕವಿರುವುದಿಲ್ಲವಲ್ಲಾ; ಪಾತಾಳದಲ್ಲಿ ನಿನ್ನನ್ನು ಸ್ತುತಿಸುವವರು ಯಾರು?

6ನಾನು ನರಳಿ ನರಳಿ ದಣಿದಿದ್ದೇನೆ; ಪ್ರತಿರಾತ್ರಿಯೂ ನನ್ನ ಮಂಚವು ಕಣ್ಣೀರಿನಿಂದ ತೇಲಾಡುತ್ತದೆ. ಹಾಸಿಗೆಯು ಕಣ್ಣೀರಿನಿಂದ ನೆನದುಹೋಗುತ್ತದೆ.

7ದುಃಖದಿಂದ ನನ್ನ ಕಣ್ಣು ಬತ್ತಿ ಹೋಯಿತು; ವಿರೋಧಿಗಳ ಬಾಧೆಯ ದೆಸೆಯಿಂದಲೇ ಅವು ಮೊಬ್ಬಾಯಿತು.

8ಧರ್ಮವನ್ನು ಮೀರಿ ನಡೆಯುವವರೇ, ನೀವೆಲ್ಲರೂ ನನ್ನಿಂದ ತೊಲಗಿಹೋಗಿರಿ; ಯೆಹೋವನು ನನ್ನ ಗೋಳಾಟಕ್ಕೆ ಕಿವಿಗೊಟ್ಟಿದ್ದಾನೆ.

9ಆತನು ನನ್ನ ವಿಜ್ಞಾಪನೆಯನ್ನು ಕೇಳಿದ್ದಾನಲ್ಲಾ; ನನ್ನ ಪ್ರಾರ್ಥನೆಯನ್ನು ಅಂಗೀಕರಿಸುವನು.

10ನನ್ನ ವಿರೋಧಿಗಳೆಲ್ಲರು ನಾಚಿಕೆಯಿಂದ ಕಳವಳಗೊಳ್ಳುವರು; ಅವರು ಪಕ್ಕನೆ ಲಜ್ಜೆಗೊಂಡು ಹಿಂದಿರುಗುವರು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath