ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 70

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.

2ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.

3ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.

4ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.

5ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath