ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 72

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರೇ, ಅರಸನಿಗೆ ನಿನ್ನ ನ್ಯಾಯವನ್ನು; ರಾಜಕುಮಾರನಿಗೆ ನಿನ್ನ ನೀತಿಯನ್ನು ಅನುಗ್ರಹಿಸು.

2ಅವನು ನಿನ್ನ ಜನರಿಗೆ ನೀತಿಯಿಂದಲೂ, ಕುಗ್ಗಿಹೋದ ನಿನ್ನವರಿಗೆ ನ್ಯಾಯವಾಗಿಯೂ ತೀರ್ಪುಕೊಡಲಿ.

3ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.

4ಅವನು ಬಡವರ ನ್ಯಾಯವನ್ನು ಸ್ಥಾಪಿಸಲಿ; ದೀನರ ಮಕ್ಕಳನ್ನು ಉದ್ಧರಿಸಲಿ; ಪ್ರಜಾಹಿಂಸಕರನ್ನು ಖಂಡಿಸಿಬಿಡಲಿ.

5ಸೂರ್ಯನು, ಚಂದ್ರನು ಇರುವವರೆಗೂ, ತಲತಲಾಂತರಗಳವರೆಗೂ ಅವರು ನಿನಗೆ ಭಯಪಡಲಿ.

6ಹುಲ್ಲುಕೊಯ್ದ ಮೇಹುಗಾಡಿನ ಮೇಲೆ ಸುರಿಯುವ ವೃಷ್ಟಿಯಂತೆಯೂ, ಭೂಮಿಯನ್ನು ನೆನಸುವ ಹದಮಳೆಯಂತೆಯೂ ಅವನು ಇರಲಿ.

7ಅವನ ದಿನಗಳಲ್ಲಿ ನೀತಿಯು ವೃದ್ಧಿಯಾಗಲಿ ; ಚಂದ್ರನಿರುವವರೆಗೂ ಪರಿಪೂರ್ಣ ಸೌಭಾಗ್ಯವಿರಲಿ.

8ಅವನು ಸಮುದ್ರದಿಂದ ಸಮುದ್ರದ ವರೆಗೂ, ಯೂಫ್ರೆಟಿಸ್ ನದಿಯಿಂದ ಭೂಮಿಯ ಕಟ್ಟಕಡೆಯವರೆಗೂ ಆಳಲಿ.

9ಅರಣ್ಯವಾಸಿಗಳು ಅವನಿಗೆ ಅಡ್ಡಬೀಳಲಿ; ಅವನ ವೈರಿಗಳು ಮಣ್ಣುಮುಕ್ಕಲಿ.

10ತಾರ್ಷೀಷ್ ಪ್ರಾಂತ್ಯದ ಮತ್ತು ಸಮುದ್ರದ ಕರಾವಳಿಯ ಅರಸರು ಕಪ್ಪಗಳನ್ನು ಸಲ್ಲಿಸಲಿ; ಶೆಬಾ ಮತ್ತು ಸೆಬಾ ಎಂಬ ಪ್ರದೇಶಗಳ ರಾಜರೂ ಕಾಣಿಕೆಗಳನ್ನು ತಂದೊಪ್ಪಿಸಲಿ.

11ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.

12ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.

13ದೀನದರಿದ್ರರ ಮೇಲೆ ಕರುಣೆಯುಳ್ಳವನಾಗಿ ಅವರ ಪ್ರಾಣಗಳನ್ನು ಸಂತೈಸುವನು.

14ಕುಯುಕ್ತಿ, ಬಲಾತ್ಕಾರಗಳಿಗೆ ತಪ್ಪಿಸಿ ಅವರ ಜೀವವನ್ನು ಕಾಯುವನು; ಅವರ ಜೀವವು ಅವನ ದೃಷ್ಟಿಯಲ್ಲಿ ಅಮೂಲ್ಯವಾಗಿರುವುದು.

15ಅವನು ಬಾಳಲಿ; ಶೆಬಾ ಪ್ರಾಂತ್ಯದ ಬಂಗಾರವು ಅವನಿಗೆ ಸಮರ್ಪಣೆಯಾಗಲಿ. ಅವನಿಗೋಸ್ಕರ ಯಾವಾಗಲೂ ದೇವರಲ್ಲಿ ವಿಜ್ಞಾಪನೆಯು ನಡೆಯಲಿ; ದಿನದಿನವೂ ಅವನಿಗೆ ಆಶೀರ್ವಾದಗಳು ಉಂಟಾಗಲಿ.

16ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.

17ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.

18ಮಹತ್ಕಾರ್ಯಗಳನ್ನು ನಡೆಸುವುದರಲ್ಲಿ ಅದ್ವಿತೀಯನೂ, ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವು.

19ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.

20ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath