ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 75

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರೇ, ಕೊಂಡಾಡುತ್ತೇವೆ; ನಿನ್ನನ್ನು ಕೊಂಡಾಡುತ್ತೇವೆ. ನಿನ್ನ ನಾಮ ಮಹತ್ವವನ್ನು ನೆನಪುಮಾಡಿಕೊಂಡು; ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುತ್ತೇವೆ.

2ದೇವರು ನುಡಿದದ್ದು, “ನಿಯಮಿತ ಕಾಲವು ಬಂದಾಗ, ನಾನೇ ನೀತಿಯಿಂದ ತೀರ್ಪುಕೊಡುವೆನು.

3ಎಲ್ಲಾ ನಿವಾಸಿಗಳೊಡನೆ ಭೂಮಿಯು ಕರಗಿ ಹೋದರೂ, ಅದರ ಸ್ತಂಭಗಳನ್ನು ಸ್ಥಾಪಿಸುವವನು ನಾನೇ” ಎಂಬುದು. ಸೆಲಾ

4ನಾನು ಹೆಮ್ಮೆಗಾರರಿಗೆ, “ಕೊಚ್ಚಿಕೊಳ್ಳಬೇಡಿರಿ” ಎಂದು; ದುಷ್ಟರಿಗೆ, “ನಿಮ್ಮ ಕೊಂಬುಗಳನ್ನು ಮೇಲೆತ್ತಬೇಡಿರಿ;

5ಕೊಂಬುಗಳನ್ನು ಮೇಲೆತ್ತಬೇಡಿರಿ; ಸೊಕ್ಕಿನಿಂದ ಮಾತನಾಡಬೇಡಿರಿ” ಎಂದು ಹೇಳುವೆನು.

6ಏಕೆಂದರೆ ಉದ್ಧಾರವು ಪೂರ್ವದಿಂದಾಗಲಿ, ಪಶ್ಚಿಮದಿಂದಾಗಲಿ, ಅರಣ್ಯದಿಂದಾಗಲಿ ಬರುವುದಿಲ್ಲ.

7ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು, ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.

8ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.

9ನಾನಾದರೋ ಸದಾ ವರ್ಣಿಸುವವನಾಗಿ, ಯಾಕೋಬ ವಂಶದವರ ದೇವರನ್ನು ಸಂಕೀರ್ತಿಸುತ್ತಾ ವರ್ಣಿಸಿ ಹಾಡುವೆನು.

10ದುಷ್ಟರ ಕೊಂಬುಗಳನ್ನೆಲ್ಲಾ ಮುರಿದುಬಿಡುವೆನು; ಆದರೆ ನೀತಿವಂತರ ಕೊಂಬುಗಳನ್ನು ಉನ್ನತಮಟ್ಟಕ್ಕೆ ಎತ್ತಲ್ಪಡುವವು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath