ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 76

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರು ಯೆಹೂದ ದೇಶದಲ್ಲಿ ಪ್ರಸಿದ್ಧಗೊಂಡವನು; ಇಸ್ರಾಯೇಲರಲ್ಲಿ ಆತನ ನಾಮವು ದೊಡ್ಡದು.

2ಸಾಲೇಮಿನಲ್ಲಿ ಆತನ ಬಿಡಾರವಿದೆ; ಚೀಯೋನಿನಲ್ಲಿ ಆತನು ವಾಸಿಸುತ್ತಾನೆ.

3ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ

4ನೀನು ತೇಜೋಮಯನು; ಕೊಳ್ಳೆಹೊಡೆದ ಬೆಟ್ಟಗಳಿಗಿಂತ ಘನ ಗಾಂಭೀರ್ಯಯುಳ್ಳವನು.

5ಧೀರಹೃದಯರು ಸುಲಿಗೆಯಾಗಿ ದೀರ್ಘನಿದ್ರೆ ಮಾಡಿದ್ದಾರೆ; ಎಲ್ಲಾ ಶೂರರ ಕೈಗಳು ಬಿದ್ದುಹೋದವು.

6ಯಾಕೋಬ ವಂಶದವರ ದೇವರೇ, ನಿನ್ನ ಗದರಿಕೆಯಿಂದ ರಥಬಲವೂ, ಅಶ್ವಬಲವೂ ಮೈಮರೆತು ಹೋದವು.

7ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?

8ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ,

9ದೇವರು ಲೋಕದ ದೀನರನ್ನು ರಕ್ಷಿಸಿ, ನ್ಯಾಯವನ್ನು ಸ್ಥಾಪಿಸುವುದಕ್ಕೋಸ್ಕರ ಎದ್ದು ಬಂದಿದ್ದಾನೆಂದು ಭೂನಿವಾಸಿಗಳು ಭಯದಿಂದ ಸ್ತಬ್ಧರಾದರು. ಸೆಲಾ

10ಮನುಷ್ಯರ ಮೇಲಿನ ಕೋಪವೂ ನಿನ್ನ ಘನತೆಗೆ ಸಾಧನವಾಗುವುದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ .

11ನಿಮ್ಮ ದೇವನಾದ ಯೆಹೋವನಿಗೆ ಹರಕೆಮಾಡಿ ಸಲ್ಲಿಸಿರಿ; ಅವನ ಸುತ್ತಲಿರುವ ಜನರು ಮಹಾಮಹಿಮನಿಗೆ ಕಾಣಿಕೆಗಳನ್ನು ಸಮರ್ಪಿಸಲಿ.

12ಆತನು ಭೂಪತಿಗಳಿಗೆ ಭಯಪ್ರದರಾಗಿದ್ದ ಪ್ರಭುಗಳ ಅಹಂಭಾವವನ್ನು ಮುರಿದುಬಿಡುವನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath