ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 79

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.

2ಅವರು ನಿನ್ನ ಸೇವಕರ ಹೆಣಗಳನ್ನು ಆಕಾಶದ ಪಕ್ಷಿಗಳಿಗೆ ಆಹಾರಮಾಡಿದರು; ನಿನ್ನ ಭಕ್ತರ ದೇಹವನ್ನು ಕಾಡುಮೃಗಗಳಿಗೆ ಹಾಕಿದರು.

3ಯೆರೂಸಲೇಮಿನ ಸುತ್ತಲೂ ಅವರ ರಕ್ತವನ್ನು ನೀರಿನ ಹಾಗೆ ಚೆಲ್ಲಿದರು; ಅವರನ್ನು ಹೂಣಿಡುವವರು ಯಾರೂ ಇರಲಿಲ್ಲ.

4ನಾವು ನಮ್ಮ ನೆರೆಹೊರೆಯ ಜನಾಂಗಗಳಿಗೆ ನಿಂದಾಸ್ಪದರಾದೆವು; ಸುತ್ತಣ ಜನರ ಪರಿಹಾಸ್ಯ ಮತ್ತು ತಿರಸ್ಕಾರಕ್ಕೆ ಗುರಿಯಾದೆವು.

5ಯೆಹೋವನೇ, ಇನ್ನೆಷ್ಟರವರೆಗೆ ಕೋಪವುಳ್ಳವನಾಗಿರುವಿ? ನಿನ್ನ ರೋಷಾಗ್ನಿಯು ಸದಾಕಾಲವೂ ಉರಿಯುತ್ತಲಿರಬೇಕೋ?

6ನಿನ್ನನ್ನು ಅರಿಯದ ಮ್ಲೇಚ್ಛರ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ, ನಿನ್ನ ರೌದ್ರವನ್ನು ಸುರಿದುಬಿಡು.

7ಅವರು ಯಾಕೋಬ್ ವಂಶದವರನ್ನು ನುಂಗಿಬಿಟ್ಟು, ಅವರ ವಾಸಸ್ಥಳಗಳನ್ನು ಹಾಳುಮಾಡಿದ್ದಾರೆ.

8ಪೂರ್ವಿಕರ ಅಪರಾಧಗಳನ್ನು ನಮ್ಮ ಹಾನಿಗಾಗಿ ನೆನಪಿಸಿಕೊಳ್ಳಬೇಡ. ಬೇಗನೆ ನಿನ್ನ ಕನಿಕರವು ನಮ್ಮನ್ನು ಎದುರುಗೊಳ್ಳಲಿ; ಬಹಳವಾಗಿ ಕುಗ್ಗಿಹೋಗಿದ್ದೇವೆ.

9ನಮ್ಮನ್ನು ರಕ್ಷಿಸುವ ದೇವರೇ, ನಿನ್ನ ನಾಮದ ಘನತೆಗೋಸ್ಕರ ಸಹಾಯಮಾಡು; ನಿನ್ನ ಹೆಸರಿಗೆ ತಕ್ಕಂತೆ ರಕ್ಷಿಸಿ ನಮ್ಮ ಪಾಪಗಳನ್ನು ಅಳಿಸಿಬಿಡು.

10ಮ್ಲೇಚ್ಛರು, “ಅವರ ದೇವರು ಎಲ್ಲಿ?” ಎಂದು ಕೇಳುವುದೇಕೆ? ನಿನ್ನ ಸೇವಕರ ರಕ್ತವನ್ನು ಸುರಿಸಿದವರಿಗೆ ನಮ್ಮ ಮುಂದೆಯೇ ದಂಡನೆಯಾದದ್ದು, ಜನಾಂಗಗಳಿಗೆ ಗೊತ್ತಾಗಲಿ.

11ಸೆರೆಹೋದವರ ನರಳುವಿಕೆಯು ನಿನ್ನ ಲಕ್ಷ್ಯಕ್ಕೆ ಬರಲಿ; ಸಾಯಲಿರುವವರನ್ನು ನಿನ್ನ ಭುಜಮಹತ್ತಿನಿಂದ ಉಳಿಸು.

12ಸ್ವಾಮಿಯೇ, ನಿನ್ನನ್ನು ನಿಂದಿಸಿದ ಸುತ್ತಣ ಜನಾಂಗಗಳ ಉಡಿಲಲ್ಲಿ, ಏಳರಷ್ಟು ನಿಂದನೆ ತುಂಬಿರುವಂತೆ ಮಾಡು.

13ನಿನ್ನ ಪ್ರಜೆಯೂ, ನೀನು ಪಾಲಿಸುವ ಮಂದೆಯೂ ಆಗಿರುವ ನಾವಾದರೋ, ಸದಾ ನಿನ್ನನ್ನು ಸ್ತುತಿಸುವವರಾಗಿ, ಮುಂದಣ ಸಂತಾನದವರೆಲ್ಲರಿಗೂ ನಿನ್ನ ಮಹತ್ತನ್ನು ವರ್ಣಿಸುತ್ತಾ ಹೋಗುವೆವು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath