ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 7

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನೇ, ನನ್ನ ದೇವರೇ, ನಿನ್ನ ಮೊರೆಹೊಕ್ಕಿದ್ದೇನೆ; ಬೆನ್ನಟ್ಟುವವರೆಲ್ಲರಿಂದ ತಪ್ಪಿಸಿ ನನ್ನನ್ನು ಕಾಪಾಡು.

2ಇಲ್ಲವಾದರೆ ನನಗೆ ರಕ್ಷಕನಿಲ್ಲವೆಂದು ತಿಳಿದು, ಶತ್ರುವು ಸಿಂಹದಂತೆ ಮೇಲೆ ಬಿದ್ದು ನನ್ನನ್ನು ಹರಿದುಬಿಟ್ಟಾನು.

3ಯೆಹೋವನೇ, ನನ್ನ ದೇವರೇ, ನಾನು ಕೈಗಳಲ್ಲಿ ಅನ್ಯಾಯವುಳ್ಳವನೂ,

4ಮಿತ್ರದ್ರೋಹಿಯೂ ಆಗಿದ್ದರೆ ಶತ್ರುವು ಹಿಂದಟ್ಟಿ ಬಂದು, ನನ್ನನ್ನು ಹಿಡಿದು, ನೆಲಕ್ಕೆ ಕೆಡವಿ ತುಳಿಯಲಿ;

5ನನ್ನ ಮಾನವನ್ನು ಮಣ್ಣುಪಾಲು ಮಾಡಲಿ. ನಾನಂಥವನಲ್ಲ; ನಿಷ್ಕಾರಣ ವೈರಿಯನ್ನು ರಕ್ಷಿಸಿದೆನಲ್ಲ. ಸೆಲಾ

6ಯೆಹೋವನೇ, ನ್ಯಾಯಸ್ಥಾಪಕನೇ, ನನಗೋಸ್ಕರ ಎಚ್ಚರವಾಗು. ಮಹಾಕೋಪದಿಂದ ಎದ್ದುಬಂದು ನನ್ನ ವಿರೋಧಿಗಳ ಕ್ರೋಧವನ್ನು ಭಂಗಪಡಿಸು.

7ಎಲ್ಲಾ ಜನಾಂಗಗಳು ನಿನ್ನ ಸುತ್ತಲು ಸಭೆಯಾಗಿ ಕೂಡಿರುವಲ್ಲಿ ನೀನು ಪುನಃ ಆರೋಹಣಮಾಡು.

8ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.

9ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.

10ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ.

11ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಆತನು ಯಾವಾಗಲೂ ದುಷ್ಟರ ವಿಷಯದಲ್ಲಿ ಕೋಪವುಳ್ಳವನು.

12ದೋಷಿಯು ಮನಸ್ಸನ್ನು ಬದಲಾಯಿಸಿಕೊಳ್ಳದೆ ಹೋದರೆ ಆತನು ತನ್ನ ಕತ್ತಿಯನ್ನು ಮಸೆಯುವನು. ತನ್ನ ಬಿಲ್ಲನ್ನು ಬಗ್ಗಿಸಿ ಸಿದ್ಧಮಾಡಿದ್ದಾನೆ.

13ಆತನು ಅದಕ್ಕೆ ಮರಣಕರವಾದ ಅಗ್ನಿಬಾಣಗಳನ್ನು ಹೂಡಿ ಅವನ ಮೇಲೆ ಪ್ರಯೋಗಿಸುವುದಕ್ಕೆ ಗುರಿಯಿಟ್ಟು ನಿಂತಿದ್ದಾನೆ.

14ನನ್ನ ಶತ್ರುವು ಬದಲಾಯಿಸಿಕೊಳ್ಳದೆ ಕೇಡನ್ನು ಹೆರಬೇಕೆಂದು ಪ್ರಸವವೇದನೆಯಲ್ಲಿದ್ದಾನೆ; ಅವನು ಹಾನಿಯನ್ನು ಹಡೆಯುವೆನೆಂದು ನೆನಸಿಕೊಂಡರೂ, ಶೂನ್ಯವನ್ನೇ ಹೆತ್ತನು ನೋಡಿರಿ.

15ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.

16ಅವನು ಮಾಡಿದ ಕುಯುಕ್ತಿ ಅವನ ತಲೆಯ ಮೇಲೆಯೇ ಬರುವುದು; ಅವನು ಮಾಡಬೇಕೆಂದಿದ್ದ ಅನ್ಯಾಯವು ಸ್ವಂತ ತಲೆಯ ಮೇಲೆ ಬೀಳುವುದು.

17ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath