ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 81

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ನಮಗೆ ಬಲಪ್ರದನಾಗಿರುವ ದೇವರಿಗೆ ಉತ್ಸಾಹಧ್ವನಿ ಮಾಡಿರಿ; ಯಾಕೋಬ್ಯರ ದೇವರಿಗೆ ಜಯಘೋಷಮಾಡಿರಿ.

2ರಾಗವನ್ನು ಎತ್ತಿರಿ; ದಮ್ಮಡಿಯನ್ನು ಬಡಿಯಿರಿ; ಇಂಪಾದ ಕಿನ್ನರಿಯನ್ನೂ, ಸ್ವರಮಂಡಲವನ್ನೂ ಬಾರಿಸಿರಿ.

3ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.

4ಇದು ಇಸ್ರಾಯೇಲರಲ್ಲಿ ಒಂದು ಕಟ್ಟಳೆ; ಇದು ಯಾಕೋಬ್ಯರ ದೇವರು ವಿಧಿಸಿದ್ದು.

5ಆತನು ಐಗುಪ್ತ ದೇಶವನ್ನು ಬಾಧಿಸಲಿಕ್ಕೆ ಹೊರಟಾಗ, ನೆನಪಿಗಾಗಿ ಯೋಸೇಫ್ಯರಲ್ಲಿ ಈ ಕಟ್ಟಳೆಯನ್ನು ನೇಮಿಸಿದನು. ಪರಿಚಯವಿಲ್ಲದವನ ಮಾತು ನನಗೆ ಕೇಳಿಸುತ್ತದೆ; ಏನೆಂದರೆ,

6“ಅವನ ಹೆಗಲನ್ನು ಹೊರೆಗೆ ತಪ್ಪಿಸಿದೆನು; ಅವನ ಕೈಗಳನ್ನು ಪುಟ್ಟಿಯಿಂದ ಬಿಡಿಸಿದೆನು.

7ಕಷ್ಟದಲ್ಲಿ ಮೊರೆಯಿಟ್ಟ ನಿನ್ನನ್ನು ವಿಮೋಚಿಸಿದೆನು; ಗುಡುಗುವ ಮೋಡದಲ್ಲಿದ್ದು ನಿನಗೆ ಉತ್ತರವನ್ನು ಕೊಟ್ಟೆನು; ಮೆರೀಬಾ ಪ್ರವಾಹಗಳ ಬಳಿಯಲ್ಲಿ ನಿನ್ನನ್ನು ಪರೀಕ್ಷಿಸಿದೆನು. ಸೆಲಾ.

8ನನ್ನ ಜನರೇ, ಕೇಳಿರಿ; ಖಂಡಿತವಾಗಿ ಹೇಳುತ್ತೇನೆ, ಇಸ್ರಾಯೇಲರೇ, ಕಿವಿಗೊಟ್ಟರೆ ಎಷ್ಟೋ ಒಳ್ಳೇದು,

9ನಿಮ್ಮಲ್ಲಿ ಅನ್ಯದೇವತೆಗಳು ಇರಬಾರದು; ಪರರ ದೇವತೆಗಳನ್ನು ಪೂಜಿಸಬಾರದು;

10ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.

11ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.

12ಆದುದರಿಂದ ಇವರು ಹಟಮಾರಿಗಳು; ತಮ್ಮ ಮನಸ್ಸಿನಂತೆ ನಡೆಯಲಿ ಎಂದು ಬಿಟ್ಟುಬಿಟ್ಟೆನು.

13ನನ್ನ ಪ್ರಜೆಗಳಾದ ಇಸ್ರಾಯೇಲರು ನನ್ನ ಮಾತನ್ನು ಕೇಳಿ, ನನ್ನ ಮಾರ್ಗದಲ್ಲಿ ನಡೆದರೆ ಎಷ್ಟೋ ಒಳ್ಳೆಯದು!

14ನಾನು ಅವರ ಎದುರಾಳಿಗಳ ಮೇಲೆ ಕೈಯೆತ್ತಿ, ಅವರ ಶತ್ರುಗಳನ್ನು ಸುಲಭವಾಗಿ ಬಗ್ಗಿಸುವೆನು.

15ಯೆಹೋವನ ದ್ವೇಷಿಗಳು ಅವರ ಮುಂದೆ ಮುದುರಿಕೊಳ್ಳುವರು; ಅವರಾದರೋ ಸದಾಕಾಲವೂ ಇರುವರು.

16ನಾನು ಅವರಿಗೆ ಶ್ರೇಷ್ಠವಾದ ಗೋದಿಯನ್ನು ಊಟಕ್ಕೆ ಕೊಟ್ಟು, ಬಂಡೆಯೊಳಗಿನ ಜೇನಿನಿಂದ ತೃಪ್ತಿಪಡಿಸುವೆನು” ಎಂಬುದೇ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath