ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 83

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ದೇವರೇ, ಸುಮ್ಮನಿರಬೇಡ! ನಿಶ್ಚಿಂತನಾಗಿ ಮೌನದಿಂದಿರಬೇಡ ಸ್ವಾಮೀ.

2ನೋಡು, ನಿನ್ನ ಶತ್ರುಗಳು ಘೋಷಿಸುತ್ತಿದ್ದಾರೆ; ನಿನ್ನ ದ್ವೇಷಿಗಳು ತಲೆಯೆತ್ತಿದ್ದಾರೆ.

3ಅವರು ನಿನ್ನ ಪ್ರಜೆಗಳಿಗೆ ವಿರುದ್ಧವಾಗಿ ಒಳಸಂಚುಮಾಡಿ, ನಿನ್ನ ಮರೆಹೊಕ್ಕವರನ್ನು ಕೆಡಿಸಬೇಕೆಂದು ಆಲೋಚಿಸಿ,

4“ಬನ್ನಿರಿ; ಅವರು ಜನಾಂಗವಾಗಿ ಉಳಿಯದಂತೆಯೂ, ಇಸ್ರಾಯೇಲೆಂಬ ಹೆಸರು ಅಳಿದುಹೋಗುವಂತೆ, ಅವರನ್ನು ಸಂಹರಿಸೋಣ” ಅಂದುಕೊಳ್ಳುತ್ತಾರೆ.

5ಎದೋಮ್ಯರ ಮತ್ತು ಇಷ್ಮಾಯೇಲರ ಪಾಳೆಯಗಳವರು, ಮೋವಾಬ್ಯರು, ಹಗ್ರೀಯರು,

6ಗೆಬಾಲ್ಯರು, ಅಮ್ಮೋನಿಯರು, ಅಮಾಲೇಕ್ಯರು, ಫಿಲಿಷ್ಟಿಯರು, ತೂರ್ ಸಂಸ್ಥಾನದವರು,

7ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;

8ಅಶ್ಯೂರ್ಯರೂ ಇವರೊಡನೆ ಕೂಡಿಕೊಂಡು, ಲೋಟನ ವಂಶದವರಿಗೆ ಭುಜಬಲವಾಗಿದ್ದಾರೆ. ಸೆಲಾ

9ನೀನು ಮಿದ್ಯಾನ್ಯರನ್ನು ಸಂಹರಿಸಿದಂತೆ ಇವರನ್ನೂ ಸಂಹರಿಸು. ಕೀಷೋನ್ ಹಳ್ಳದ ಬಳಿಯಲ್ಲಿ ಸೀಸೆರ್, ಯಾಬೀನ್ ಎಂಬುವವರಿಗೆ ಮಾಡಿದಂತೆ, ಇವರಿಗೂ ಮಾಡು.

10ಅವರು ಎಂದೋರಿನಲ್ಲಿ ವಧಿಸಲ್ಪಟ್ಟು, ಹೊಲದ ಗೊಬ್ಬರವಾಗಿ ಹೋದರಲ್ಲಾ.

11ಓರೇಬ್ ಮತ್ತು ಜೇಬ್ ಎಂಬವರ ಗತಿಯು, ಇವರ ಶ್ರೀಮಂತರಿಗೂ ಸಂಭವಿಸಲಿ; ಜೇಬಹ ಮತ್ತು ಚಲ್ಮುನ್ನ ಎಂಬವರ ಹಾಗೆ ಇವರ ಪ್ರಭುಗಳಿಗೂ ಆಗಲಿ.

12ಅವರು “ದೇವರು ಅವರಿಗೆ ಕೊಟ್ಟ ದೇಶವನ್ನು ಸ್ವಾಧೀನಮಾಡಿಕೊಳ್ಳುತ್ತೇವೆ” ಅಂದುಕೊಳ್ಳುತ್ತಾರಲ್ಲಾ.

13ನನ್ನ ದೇವರೇ, ಅವರನ್ನು ಸುಂಟರ ಗಾಳಿಯಲ್ಲಿ ಸುತ್ತಾಡುವ ಧೂಳಿನಂತೆಯೂ, ಹಾರಿಹೋಗುವ ಹೊಟ್ಟಿನಂತೆಯೂ ಮಾಡು.

14ನೀನು ಕಾಡನ್ನು ಸುಟ್ಟುಬಿಡುವ ಬೆಂಕಿಯಂತೆಯೂ, ಪರ್ವತಗಳನ್ನು ದಹಿಸಿಬಿಡುವ ಜ್ವಾಲೆಯಂತೆಯೂ ಇದ್ದು,

15ನಿನ್ನ ಸುಂಟರಗಾಳಿಯಿಂದ ಅವರನ್ನು ಬೆನ್ನಟ್ಟು; ತುಫಾನಿನಿಂದ ಅವರನ್ನು ಕಳವಳಗೊಳಿಸು.

16ನಾಚಿಕೆಯು ಅವರ ಮುಖವನ್ನು ಕವಿಯಲಿ. ಯೆಹೋವನೇ, ಆಗ ಅವರು ನಿನ್ನ ಹೆಸರನ್ನು ಕೇಳಿಕೊಂಡು ಬಂದಾರು.

17ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ.

18ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath