ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 86

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನೇ, ಕಿವಿಗೊಡು; ನನಗೆ ಸದುತ್ತರವನ್ನು ದಯಪಾಲಿಸು; ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ.

2ನಾನು ನಿನ್ನ ಭಕ್ತನು; ನನ್ನ ಪ್ರಾಣವನ್ನು ಉಳಿಸು; ನೀನೇ ನನ್ನ ದೇವರು; ನಿನ್ನಲ್ಲಿ ಭರವಸವಿಟ್ಟಿರುವ ನಿನ್ನ ಸೇವಕನನ್ನು ರಕ್ಷಿಸು.

3ಕರ್ತನೇ, ಕರುಣಿಸು; ದಿನವೆಲ್ಲಾ ನಿನಗೆ ಮೊರೆಯಿಡುತ್ತೇನೆ.

4ಕರ್ತನೇ, ನಿನ್ನ ಸೇವಕನ ಹೃದಯವನ್ನು ಆನಂದಗೊಳಿಸು; ನಿನ್ನನ್ನೇ ನಿರೀಕ್ಷಿಸುತ್ತಿರುವೆನಲ್ಲಾ.

5ಕರ್ತನೇ, ನೀನು ಒಳ್ಳೆಯವನೂ, ಕ್ಷಮಿಸುವವನೂ, ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದಿಯಲ್ಲಾ.

6ಯೆಹೋವನೇ, ನನ್ನ ಪ್ರಾರ್ಥನೆಗೆ ಕಿವಿಗೊಡು; ನನ್ನ ವಿಜ್ಞಾಪನೆಗಳ ಕೂಗನ್ನು ಲಾಲಿಸು.

7ನೀನು ಸದುತ್ತರವನ್ನು ದಯಪಾಲಿಸುವಿಯೆಂದು ನಂಬಿ, ನನ್ನ ಇಕ್ಕಟ್ಟಿನ ದಿನದಲ್ಲಿ ನಿನ್ನನ್ನೇ ಕರೆಯುವೆನು.

8ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.

9ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.

10ಮಹೋನ್ನತನು, ಮಹತ್ಕಾರ್ಯಗಳನ್ನು ನಡೆಸುವವನು ನೀನು; ನೀನೊಬ್ಬನೇ ದೇವರು.

11ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.

12ಕರ್ತನೇ, ನನ್ನ ದೇವರೇ, ಮನಃಪೂರ್ವಕವಾಗಿ ನಿನ್ನನ್ನು ಕೊಂಡಾಡುವೆನು; ಎಂದೆಂದಿಗೂ ನಿನ್ನ ನಾಮವನ್ನು ಘನಪಡಿಸುವೆನು.

13ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.

14ದೇವರೇ, ಅಹಂಕಾರಿಗಳು ನನಗೆ ವಿರುದ್ಧವಾಗಿ ಎದ್ದಿದ್ದಾರೆ; ಬಲಾತ್ಕಾರಿಗಳ ಗುಂಪು ನನ್ನ ಪ್ರಾಣಕ್ಕಾಗಿ ಕಾದಿದೆ. ಅವರು ನಿನ್ನನ್ನು ಲಕ್ಷಿಸುವುದಿಲ್ಲ.

15ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.

16ಕಟಾಕ್ಷವಿಟ್ಟು ನನ್ನನ್ನು ಕರುಣಿಸು; ನಿನ್ನ ಸೇವಕನಿಗೆ ಬಲವನ್ನು ಅನುಗ್ರಹಿಸು; ನಿನ್ನ ಸೇವಕಳ ಮಗನನ್ನು ರಕ್ಷಿಸು.

17ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath