ಕೀರ್ತನೆಗಳು 87
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.
2ಆತನು ಯಾಕೋಬ್ ವಂಶದವರ ಎಲ್ಲಾ ನಿವಾಸಗಳಿಗಿಂತ, ಚೀಯೋನಿನ ದ್ವಾರಗಳನ್ನು ಹೆಚ್ಚಾಗಿ ಪ್ರೀತಿಸುತ್ತಾನೆ.
3ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನೆಂದರೆ,
4“ರಹಬ , ಬಾಬೆಲ್ ದೇಶಗಳವರನ್ನು, ನನ್ನನ್ನು ಬಲ್ಲವರಲ್ಲಿ ಎಣಿಸುವೆನು. ಇಗೋ ಫಿಲಿಷ್ಟಿಯ, ತೂರ್, ಕೂಷ್, ಜನಾಂಗಗಳು ಅಲ್ಲೇ ಹುಟ್ಟಿದವು” ಎಂಬುದೇ.
5ಇದರಿಂದ ಚೀಯೋನೇ ಪ್ರತಿಯೊಂದು ಜನಾಂಗದ ಜನ್ಮನಗರವೆಂದು ಹೇಳಲ್ಪಡುವುದು; ಅದನ್ನು ಪರಾತ್ಪರನಾದ ದೇವರು ತಾನೇ ಸ್ಥಿರಪಡಿಸುವನು.
6ಯೆಹೋವನು ಜನಾಂಗಗಳ ಪಟ್ಟಿಯನ್ನು ಮಾಡುವಾಗ, “ಪ್ರತಿಯೊಂದರ ವಿಷಯ ಇದು ಅಲ್ಲಿಯೇ ಹುಟ್ಟಿದ್ದು” ಎಂದು ಬರೆಯುವನು. ಸೆಲಾ
7ಇವರು ಹಾಡುತ್ತಾ, ಕುಣಿಯುತ್ತಾ, “ನನ್ನ ಜೀವಜಲದ ಒರತೆಗಳೆಲ್ಲಾ ನಿನ್ನಲ್ಲಿಯೇ ಇವೆ” ಎಂದು ಹೇಳುವರು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath