ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 90

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.

2ಬೆಟ್ಟಗಳು ಉಂಟಾಗುವುದಕ್ಕಿಂತ ಮೊದಲೇ, ಭೂಮಿಯೂ ಅದರ ದೇಶಗಳೂ ನಿರ್ಮಾಣವಾಗುವುದಕ್ಕಿಂತ ಮೊದಲೇ, ಯುಗಯುಗಾಂತರಗಳಲ್ಲಿಯೂ ನೀನೇ ದೇವರು.

3“ಮನುಷ್ಯರೇ, ಸಾಯಿರಿ” ಎಂದು ಆಜ್ಞಾಪಿಸಿ, ಅವರನ್ನು ಪುನಃ ಮಣ್ಣಿಗೆ ಸೇರಿಸುತ್ತೀ.

4ಸಾವಿರ ವರ್ಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನೆಯ ದಿನದಂತೆಯೂ, ರಾತ್ರಿಯ ಜಾವದಂತೆಯೂ ಇವೆ.

5ನೀನು ಮನುಷ್ಯರನ್ನು ಪ್ರವಾಹದಿಂದ ಬಡಿದುಕೊಂಡು ಹೋಗುತ್ತೀ; ಅವರು ನಿದ್ರೆಗೆ ಸಮಾನರೇ. ಅವರು ಹೊತ್ತಾರೆಯಲ್ಲಿ ಚಿಗುರುವ ಹುಲ್ಲಿನಂತಿದ್ದಾರೆ.

6ಅದು ಮುಂಜಾನೆಯಲ್ಲಿ ಬೆಳೆದು ಹೂಬಿಡುತ್ತದೆ; ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗಿಹೋಗುತ್ತದೆ.

7ನಿನ್ನ ಕೋಪದಿಂದ ನಾವು ಇಲ್ಲವಾದೆವು; ನಿನ್ನ ರೌದ್ರದಿಂದ ತಲ್ಲಣಗೊಂಡೆವು.

8ನಮ್ಮ ದ್ರೋಹಗಳನ್ನು ನಿನ್ನ ಮುಂದೆಯೂ, ನಮ್ಮ ಗುಪ್ತಪಾಪಗಳನ್ನು ನಿನ್ನ ತೇಜೋದೃಷ್ಟಿಯಲ್ಲಿಯೂ ಇಟ್ಟುಕೊಂಡಿದ್ದಿ.

9ನಿನ್ನ ರೋಷದಿಂದ ನಮ್ಮ ಕಾಲವೆಲ್ಲಾ ಕಳೆದು ಹೋಯಿತು; ನಮ್ಮ ವರ್ಷಗಳು ನಿಟ್ಟುಸಿರಿನಂತೆ ತೀರಿಹೋದವು.

10ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ, ಬಲ ಹೆಚ್ಚಿದರೆ ಎಂಭತ್ತು; ಕಷ್ಟಸಂಕಟಗಳೇ ಅದರ ಆಡಂಬರ. ಅದು ಬೇಗನೆ ಗತಿಸಿಹೋಗುತ್ತದೆ; ನಾವು ಹಾರಿ ಹೋಗುತ್ತೇವೆ.

11ನಿನ್ನ ಕೋಪದ ಬಲವನ್ನೂ, ಭಯಭಕ್ತಿಗೆ ಕಾರಣವಾಗಿರತಕ್ಕ ನಿನ್ನ ರೌದ್ರವನ್ನೂ ಗ್ರಹಿಸುವವರಾರು?

12ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.

13ಯೆಹೋವನೇ, ಮನಸ್ಸನ್ನು ಬೇರೆ ಮಾಡಿಕೋ; ಎಷ್ಟರವರೆಗೆ ಕೋಪ ಮಾಡುವಿ? ನಿನ್ನ ಸೇವಕರ ಮೇಲೆ ಕರುಣೆಯಿರಲಿ.

14ಮುಂಜಾನೆಯಲ್ಲಿ ನಿನ್ನ ಕೃಪೆಯಿಂದ ನಮ್ಮನ್ನು ಸಂತೃಪ್ತಿಪಡಿಸು; ಆಗ ಜೀವಮಾನದಲ್ಲೆಲ್ಲಾ ಉಲ್ಲಾಸಿಸಿ ಹರ್ಷಿಸುವೆವು.

15ನೀನು ನಮ್ಮನ್ನು ಕುಗ್ಗಿಸಿದ ದಿನಗಳಿಗೂ, ನಾವು ಕೇಡನ್ನು ಅನುಭವಿಸಿದ ವರ್ಷಗಳಿಗೂ ತಕ್ಕಂತೆ ನಮ್ಮನ್ನು ಸಂತೋಷಪಡಿಸು.

16ನಿನ್ನ ಸೇವಕರಿಗೆ ನಿನ್ನ ರಕ್ಷಣಾ ಕಾರ್ಯವೂ, ಅವರ ಮಕ್ಕಳಿಗೋಸ್ಕರ ನಿನ್ನ ಮಹತ್ತೂ ಪ್ರಕಟವಾಗಲಿ.

17ನಮ್ಮ ಯೆಹೋವ ದೇವರ ಪ್ರಸನ್ನತೆಯು ನಮ್ಮ ಮೇಲೆ ಇರಲಿ. ನಾವು ಕೈ ಹಾಕಿದ ಕೆಲಸವನ್ನು ನಮಗೆ ಸಫಲಪಡಿಸು; ನಾವು ಕೈಹಾಕಿದ ಕೆಲಸವನ್ನು ಸಫಲ ವಾಗುವಂತೆ ಮಾಡು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath