ಕೀರ್ತನೆಗಳು 91
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.
2ನಾನು ಯೆಹೋವನಿಗೆ, “ನೀನೇ ನನ್ನ ಶರಣನು, ನನ್ನ ದುರ್ಗವು, ನಾನು ಭರವಸವಿಟ್ಟಿರುವ ನನ್ನ ದೇವರು” ಎಂದು ಹೇಳುವೆನು.
3ನನ್ನನ್ನು ಬೇಟೆಗಾರನ ಬಲೆಯಿಂದಲೂ, ಮರಣಕರ ವ್ಯಾಧಿಯಿಂದಲೂ ತಪ್ಪಿಸುವವನು ಆತನೇ.
4ಆತನು ನನ್ನನ್ನು ತನ್ನ ರೆಕ್ಕೆಗಳಿಂದ ಹೊದಗಿಸುವನು; ಆತನ ಪಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆ. ಆತನ ಸತ್ಯತೆಯೇ ನನಗೆ ಖೇಡ್ಯವೂ, ಗುರಾಣಿಯೂ ಆಗಿದೆ.
5ರಾತ್ರಿಯಲ್ಲಿ ಭಯಹುಟ್ಟಿಸುವ ಯಾವುದಕ್ಕೂ, ಹಗಲಲ್ಲಿ ಹಾರಿಬರುವ ಬಾಣಕ್ಕೂ,
6ಕತ್ತಲೆಯಲ್ಲಿ ಸಂಚರಿಸುವ ವಿಪತ್ತಿಗೂ, ಹಾನಿಕರವಾದ ಮಧ್ಯಾಹ್ನದ ಕೇಡಿಗೂ ಭಯಪಡಬೇಕಾಗಿಲ್ಲ.
7ನಿನ್ನ ಮಗ್ಗುಲಲ್ಲಿ ಸಾವಿರ ಜನರು, ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರು ಸತ್ತು ಬಿದ್ದರೂ ನಿನಗೇನೂ ತಟ್ಟದು.
8ನೀನು ಅದನ್ನು ಕಣ್ಣಾರೆ ಕಂಡು, ದುಷ್ಟರಿಗೆ ಪ್ರತಿದಂಡನೆಯುಂಟು ಎಂಬುದಕ್ಕೆ ಸಾಕ್ಷಿಯಾಗಿರುವಿಯಷ್ಟೆ.
9ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.
10ಯಾವ ಕೇಡೂ ನಿನಗೆ ಸಂಭವಿಸದು; ಉಪದ್ರವವು ನಿನ್ನ ಗುಡಾರದ ಸಮೀಪಕ್ಕೂ ಬಾರದು.
11ನೀನು ಹೋಗುವಲ್ಲೆಲ್ಲಾ ನಿನ್ನನ್ನು ಕಾಯುವುದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆಕೊಡುವನು.
12ನಿನ್ನ ಕಾಲು ಕಲ್ಲಿಗೆ ತಗಲದಂತೆ, ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು.
13ಸಿಂಹ ಮತ್ತು ಸರ್ಪಗಳ ಮೇಲೆ ನಡೆಯುವಿ; ಪ್ರಾಯದ ಸಿಂಹವನ್ನೂ, ಘಟಸರ್ಪವನ್ನೂ ತುಳಿದುಬಿಡುವಿ.
14ಅವನು ನನ್ನಲ್ಲಿ ಆಸಕ್ತನಾಗಿರುವುದರಿಂದ ಅವನನ್ನು ರಕ್ಷಿಸುವೆನು; ನನ್ನ ನಾಮವನ್ನು ಅರಿತವನಾಗಿರುವುದರಿಂದ ಅವನನ್ನು ಉದ್ಧರಿಸುವೆನು.
15ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;
16ದೀರ್ಘಾಯುಷ್ಯವನ್ನು ಅನುಗ್ರಹಿಸಿ, ಅವನನ್ನು ತೃಪ್ತಿಪಡಿಸುವೆನು; ನನ್ನ ವಿಶೇಷವಾದ ರಕ್ಷಣೆಯನ್ನು ತೋರಿಸುವೆನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath