ಕೀರ್ತನೆಗಳು 92
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.
2ವೀಣೆ, ಸ್ವರಮಂಡಲಗಳಿಂದಲೂ, ಕಿನ್ನರಿಯ ಘನಸ್ವರದಿಂದಲೂ,
3ಹೊತ್ತಾರೆಯಲ್ಲಿ ನಿನ್ನ ಪ್ರೇಮವನ್ನೂ, ರಾತ್ರಿಯಲ್ಲಿ ನಿನ್ನ ಸತ್ಯವನ್ನೂ ವರ್ಣಿಸುವುದು ಉಚಿತವಾಗಿದೆ.
4ಯೆಹೋವನೇ, ನಿನ್ನ ಕ್ರಿಯೆಗಳಿಂದ ನನ್ನನ್ನು ಸಂತೋಷಪಡಿಸಿದ್ದಿ; ನಿನ್ನ ಕೆಲಸಗಳಿಗಾಗಿ ಉತ್ಸಾಹಧ್ವನಿ ಮಾಡುತ್ತೇನೆ.
5ಯೆಹೋವನೇ, ನಿನ್ನ ಕೃತ್ಯಗಳು ಎಷ್ಟೋ ಶ್ರೇಷ್ಠವಾಗಿವೆ; ನಿನ್ನ ಆಲೋಚನೆಗಳು ಅಶೋಧ್ಯವಾಗಿವೆ.
6ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.
7ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
8ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.
9ಯೆಹೋವನೇ, ಇಗೋ ನಿನ್ನ ಶತ್ರುಗಳು! ಅವರೆಲ್ಲಾ ನಾಶವಾಗುತ್ತಿದ್ದಾರೆ. ಅಧರ್ಮಿಗಳೆಲ್ಲಾ ಚದರಿಹೋಗುವರು.
10ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.
11ನನ್ನ ಶತ್ರುಗಳಿಗುಂಟಾದ ದುರ್ಗತಿಯನ್ನು ಕಣ್ಣಾರೆ ಕಂಡಿದ್ದೇನೆ; ನನಗೆ ವಿರುದ್ಧವಾಗಿ ಎದ್ದವರ ವಿಪತ್ತನ್ನು ಕಿವಿಯಾರೆ ಕೇಳಿದ್ದೇನೆ.
12ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.
13ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
14ಮುಪ್ಪಿನಲ್ಲಿಯೂ ಫಲಿಸುವರು; ಪುಷ್ಟಿಯಾಗಿದ್ದು ಶೋಭಿಸುವರು.
15ಹೀಗೆ ಅವರು ಯೆಹೋವನ ಸತ್ಯಸಂಧತೆಗೆ ದೃಷ್ಟಾಂತರಾಗಿರುವರು. ಆತನೇ ನನ್ನ ಬಂಡೆಯು; ಆತನು ನಿರ್ವಂಚಕನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath