ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 93

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.

2ಅನಾದಿಯಿಂದ ನಿನ್ನ ಸಿಂಹಾಸನವು ಸ್ಥಿರವಾಗಿದೆ; ಯುಗಯುಗಾಂತರದಿಂದಲೂ ನೀನು ಇರುವಿ.

3ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.

4ಜಲರಾಶಿಗಳ ಘೋಷಕ್ಕಿಂತಲೂ, ಮಹಾತರಂಗಗಳ ಗರ್ಜನೆಗಿಂತಲೂ, ಉನ್ನತದಲ್ಲಿರುವ ಯೆಹೋವನ ಮಹಿಮೆಯು ಗಾಂಭೀರ್ಯವುಳ್ಳದ್ದು.

5ಯೆಹೋವನೇ, ನಿನ್ನ ಕಟ್ಟಳೆಗಳು ಬಹುಖಂಡಿತವಾಗಿವೆ; ಸದಾ ನಿನ್ನ ಮನೆಗೆ ಯೋಗ್ಯವಾದದ್ದು ಪರಿಶುದ್ಧತ್ವವೇ.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath