ಕ್ರಿಶ್ಚಿಯನ್ ಧರ್ಮ
ಹಿಂದೆ

ಕೀರ್ತನೆಗಳು 95

ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ

1ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.

2ಕೃತಜ್ಞತಾಸ್ತುತಿಯೊಡನೆ ಆತನ ಸನ್ನಿಧಿಗೆ ಸೇರೋಣ; ಕೀರ್ತನೆಗಳಿಂದ ಆತನಿಗೆ ಜಯಘೋಷ ಮಾಡೋಣ.

3ಯೆಹೋವನು ಮಹಾದೇವರೂ, ಎಲ್ಲಾ ದೇವರುಗಳಲ್ಲಿ ಮಹಾರಾಜನೂ ಆಗಿದ್ದಾನೆ.

4ಭೂಮಿಯ ಅಗಾಧವು ಆತನ ಕೈಯಲ್ಲಿರುತ್ತದೆ; ಪರ್ವತಶಿಖರಗಳು ಆತನವೇ.

5ಆತನೇ ಸಮುದ್ರವನ್ನು ನಿರ್ಮಿಸಿದವನು; ಅದು ಆತನದೇ, ಒಣನೆಲವು ಆತನ ಕೈಕೆಲಸವೇ.

6ಬನ್ನಿರಿ; ನಮ್ಮ ನಿರ್ಮಾಣಿಕನಾದ ಯೆಹೋವನಿಗೆ ಸಾಷ್ಟಾಂಗವೆರಗಿ ಆರಾಧಿಸೋಣ.

7ಆತನು ನಮ್ಮ ದೇವರು; ನಾವೋ ಆತನು ಪಾಲಿಸುವ ಪ್ರಜೆಯೂ, ಆತನ ಕೈಕೆಳಗಿರುವ ಹಿಂಡೂ ಆಗಿದ್ದೇವೆ. ನೀವು ಈ ಹೊತ್ತು ಆತನ ಶಬ್ದಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೇಯದು.

8ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ , ಮಸ್ಸಾದಲ್ಲಿ ಮಾಡಿದ ದಿನದಂತೆ, ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.

9ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಪರಿಶೋಧಿಸಿದರು.

10ನಾನು ನಲ್ವತ್ತು ವರ್ಷ ಆ ಸಂತತಿಯವರ ವಿಷಯದಲ್ಲಿ ಬೇಸರಗೊಂಡೆನು; “ಈ ಜನರು ಹೃದಯದಲ್ಲಿ ತಪ್ಪಿಹೋಗುವವರು, ನನ್ನ ಆಜ್ಞೆಗಳಿಗೆ ವಿಧೇಯರಾಗದವರು ” ಎಂದು ಹೇಳಿದೆನು.

11ಆದುದರಿಂದ ಇವರು, “ನನ್ನ ವಿಶ್ರಾಂತಿಯಲ್ಲಿ ಸೇರಬಾರದು” ಎಂದು ಕೋಪಗೊಂಡು ಪ್ರಮಾಣಮಾಡಿದೆನು.

ಮೂಲ: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

WEBREATH · 11:11

«He himself gives everyone life and breath and everything else» — Acts 17:25

Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.

WEBREATH — the Minute at 11:11, your own local time — we are One Breath