ಕೀರ್ತನೆಗಳು 96
ನಿಮ್ಮ ಭಾಷೆಯಲ್ಲಿ ಇನ್ನೂ ಯಾವುದೇ ಅನುವಾದವಿಲ್ಲ — ಇಂಗ್ಲಿಷ್ ತೋರಿಸಲಾಗುತ್ತಿದೆ
1ಯೆಹೋವನಿಗೆ ಹೊಸ ಕೀರ್ತನೆಯನ್ನು ಹಾಡಿರಿ; ಎಲ್ಲಾ ಭೂನಿವಾಸಿಗಳೇ, ಯೆಹೋವನಿಗೆ ಹಾಡಿರಿ.
2ಯೆಹೋವನಿಗೆ ಹಾಡಿರಿ; ಆತನ ನಾಮವನ್ನು ಕೊಂಡಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.
3ಜನಾಂಗಗಳಲ್ಲಿ ಆತನ ಘನತೆಯನ್ನೂ, ಎಲ್ಲಾ ಜನರಲ್ಲಿ ಆತನ ಅದ್ಭುತಕೃತ್ಯಗಳನ್ನೂ ಪ್ರಸಿದ್ಧಪಡಿಸಿರಿ.
4ಯೆಹೋವನು ದೊಡ್ಡವನೂ, ಬಹು ಸ್ತುತ್ಯನೂ ಆಗಿದ್ದಾನೆ; ಎಲ್ಲಾ ದೇವರುಗಳಲ್ಲಿ ಆತನೇ ಮಹಾದೇವರು.
5ಜನಾಂಗಗಳ ದೇವತೆಗಳೆಲ್ಲಾ ಬೊಂಬೆಗಳೇ; ಯೆಹೋವನಾದರೋ ಗಗನಮಂಡಲವನ್ನು ನಿರ್ಮಿಸಿದನು.
6ಆತನ ಸಾನ್ನಿಧ್ಯದಲ್ಲಿ ಘನತೆ ಮತ್ತು ಮಹಿಮೆಗಳೂ, ಆತನ ಪವಿತ್ರಾಲಯದಲ್ಲಿ ಬಲ ಮತ್ತು ಸೌಂದರ್ಯಗಳೂ ಇರುತ್ತವೆ.
7ಭೂಜನಾಂಗಗಳೇ, ಬಲಪ್ರಭಾವಗಳು ಯೆಹೋವನವೇ, ಯೆಹೋವನವೇ, ಎಂದು ಹೇಳಿ ಆತನನ್ನು ಘನಪಡಿಸಿರಿ.
8ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಕಾಣಿಕೆಯೊಡನೆ ಆತನ ಅಂಗಳಗಳಿಗೆ ಬನ್ನಿರಿ.
9ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ನಮಸ್ಕರಿಸಿರಿ; ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಭಯಭಕ್ತಿಯಿಂದಿರಿ.
10ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ; ಸರ್ವರಿಗೂ ನ್ಯಾಯಾನುಸಾರವಾಗಿ ತೀರ್ಪುಕೊಡುವನೆಂದು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
11ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.
12ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ವನದ ಎಲ್ಲಾ ಮರಗಳು ಉತ್ಸಾಹಧ್ವನಿ ಮಾಡಲಿ.
13ಆತನು ಬರುತ್ತಾನೆ; ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ. ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಸತ್ಯತೆಯಿಂದಲೂ ನ್ಯಾಯತೀರಿಸುವನು.
WEBREATH · 11:11
«He himself gives everyone life and breath and everything else» — Acts 17:25
Breath is one for all: everyone lives by it, whoever they are and whatever they believe. Every day at 11:11 local time people stop for sixty seconds, breathe, and thank GOD for the breath — each in their own words, each within themselves. In that minute we are One Breath.
WEBREATH — the Minute at 11:11, your own local time — we are One Breath